Author: karavalinews

ಕಾರ್ಕಳ ತಾಲೂಕು ಕಚೇರಿ ಪಾರ್ಕಿನಲ್ಲಿ ಕಡವೆ ಮೃತದೇಹ ಪತ್ತೆ

ಕಾರ್ಕಳ, ಸೆ.15: ಕಾರ್ಕಳ ತಾಲೂಕು ಕಚೇರಿ ಬಳಿಯ ಅಟಲ್ ಬಿಹಾರಿ ವಾಜಪೇಯಿ ಪಾರ್ಕಿನಲ್ಲಿ ಕಡವೆಯ ಮೃತದೇಹ ಪತ್ತೆಯಾಗಿದೆ. ಮಂಗಳವಾರ ಮುಂಜಾನೆ ವಾಕಿಂಗ್ ಬಂದವರು ಕಡವೆ ಸತ್ತು ಬಿದ್ದಿರುವುದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕುಕ್ಕುಂದೂರು ಗ್ರಾಮದ ಪರಪು ನಕ್ರೆ ಅರಣ್ಯ…

ಸಾಣೂರು : ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ; ಅಗ್ನಿಶಾಮಕ  ದಳದಿಂದ ರಕ್ಷಣಾ ಕಾರ್ಯಾಚರಣೆ

ಕಾರ್ಕಳ, ಸೆ.14: ಸಾಣೂರು ಗ್ರಾಮದ ಇಂದಿರಾನಗರದಲ್ಲಿ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಮನೆಯ ಆವರಣದ ಬಾವಿಗೆ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದ್ದು, ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಸಮಯೋಚಿತ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತವಲ್ಲಿ ಯಶಸ್ವಿಯಾಗಿದ್ದಾರೆ ಇಂದಿರಾನಗರ ನಿವಾಸಿ ಗುರುಪ್ರಸಾದ್…

2029ರೊಳಗೆ ಎನ್‌ಡಿಎ ಆಡಳಿತದ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ:ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಘೋಷಣೆ

ಮುಂಬಯಿ, ಸೆ.14: ಮುಂಬರುವ ಲೋಕಸಭಾ ಚುನಾವಣೆಯ ಮುನ್ನವೇ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರದಲ್ಲಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲಾಗುವುದೆಂದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಅವರು ಭಾನುವಾರ ಮುಂಬಯಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

ಟಿ.ನರಸೀಪುರ ಇನ್ಸ್ಪೆಕ್ಟರ್ ಧನಂಜಯ ವಿರುದ್ಧ ಬಿಜೆಪಿ ನಾಯಕರು ಕೆಂಡ: ಪೊಲೀಸ್ ಠಾಣೆ ಮುಂದೆ ಧರಣಿ ನಡೆಸುತ್ತಿದ್ದ ಆರ್ ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿ ಬಿಜೆಪಿ ನಾಯಕರ ಬಂಧನ

ಮೈಸೂರು, ಸೆ.13: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮೈಸೂರು ಜಿಲ್ಲೆಯ ಟಿ. ನರಸೀಪುರ ಇನ್ಸ್​​ಪೆಕ್ಟರ್ ಧನಂಜಯ್ ಅವರು ನೀಡಿದ ಹೇಳಿಕೆ ಇದೀಗ ಆಡಳಿರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಇನ್ಸ್​​ಪೆಕ್ಟರ್ ಧನಂಜಯ್…

ಕಾರ್ಕಳ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನ ಅಭಿವೃದ್ಧಿ ಸಮಿತಿ ವತಿಯಿಂದ ಸಮಾಲೋಚನಾ ಸಭೆ

ಕಾರ್ಕಳ,ಸೆ.13 : ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನ ಡೆವಲಪ್‌ಮೆಂಟ್ ಟ್ರಸ್ಟ್ ಇದರ ವತಿಯಿಂದ ನಿರ್ಮಿಸಲ್ಪಡುವ ವಿಶ್ವಕರ್ಮ ಸಮುದಾಯ ಭವನ” ನಿರ್ಮಾಣ ಕಾರ್ಯದ ಪೂರ್ವಭಾವಿಯಾಗಿ ಸಾಮೂಹಿಕ ಶ್ರೀ ನವಚಂಡಿಕಾ ಹೋಮವನ್ನು ಸಮಾಜದ ಸರ್ವಜನರ ಸಹಕಾರದೊಂದಿಗೆ ನೆರವೇರಿಸುವುದಾಗಿ ನಿರ್ಣಯಿಸಲಾಗಿದ್ದು, ಆ ಪ್ರಯುಕ್ತ ಶ್ರೀ ಕ್ಷೇತ್ರದ ಆಡಳಿತ…

‘ಲೋಫರ್ ನನ್ ಮಗನ ತಲೆ ಬೇಕೇಬೇಕು’ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಜೀವ ಬೆದರಿಕೆ: ಫೇಸ್’ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿ ಬಂಧನ

ಕಾರ್ಕಳ, ಸೆ.13: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಯಾವುದೋ ಚಲನಚಿತ್ರದ ವಿಡಿಯೋಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ಮುಖವನ್ನು ಎಡಿಟ್ ಮಾಡಿ ಲೋಫರ್ ನ್ ಮಗನ ತಲೆ ಬೇಕೇಬೇಕು ಎಂದು ಕೊಲೆ ಬೆದರಿಕೆ ಹಾಕಿದ ರೀತಿಯಲ್ಲಿ ಪೋಸ್ಟ್ ಮಾಡಿದ್ದಾನೆ…

ಕಲ್ಯಾ: ಅಕ್ರಮ ಗಣಿಗಾರಿಕೆ ಮೇಲೆ ಪೊಲೀಸರ ದಾಳಿ: ಲೈಸನ್ಸ್ ಮುಗಿದ್ದಿದರೂ ಕಾರ್ಯಾಚರಿಸುತ್ತಿದ್ದ ಸಿಎಮ್‌ಎಸ್ ಸ್ಟೋನ್ ಕ್ರಶರ್ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ,ಸೆ.12: ಕಲ್ಯಾ ಗ್ರಾಮದಲ್ಲಿ ಅನಧಿಕೃತ ಜಲ್ಲಿ ಕ್ರಶರಗಳು ಕಾರ್ಯಾಚರಿಸುತ್ತಿದ್ದು, ಇದರ ಮಾಲಕರು ಸರ್ಕಾರಕ್ಕೆ ನಯಾಪೈಸೆ ರಾಜಸ್ವ ಪಾವತಿಸದೇ ಅವ್ಯಾಹತವಾಗಿ ಗಣಿ ಸಂಪತ್ತು ದೋಚುತ್ತಿದ್ದಾರೆ. ಕ್ರಶರ್ ಗಳ ಗಣಿಲೂಟಿ ವಿರುದ್ಧ ದೂರುಗಳು ಬಂದ ಹಿನ್ನಲೆಯಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್‌ಐ ಪ್ರಸನ್ನ…

ಕಾರ್ಕಳ: ಆಶ್ರಯ ಮನೆ ವಿತರಣೆ ವಿಳಂಬ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಕಾರ್ಕಳ,: ಕಾರ್ಕಳ ತಾಲೂಕಿನ ಪುರಸಭಾ ವ್ಯಾಪ್ತಿಯ ಮನೆ ರಹಿತರಿಗೆ ಸರ್ಕಾರದ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಆಶ್ರಯ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸುವಲ್ಲಿ ಶಾಸಕ ವಿ. ಸುನಿಲ್ ಕುಮಾರ್ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು. ಬ್ಲಾಕ್ ಕಾಂಗ್ರೆಸ್…

ಅಜೆಕಾರಿನಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ: ಜನಸಾಮನ್ಯರಿಗೆ ಸರ್ಕಾರಿ ಸೇವೆಗಳು ಸಿಗಬೇಕಾದರೆ ಸುತ್ತೋಲೆಗಳ ಸರಳೀಕರಣ ಅಗತ್ಯವಿದೆ: ಪ್ರಜಾಸೇವೆ ಕಾರ್ಯಕ್ರಮ ಉದ್ಘಾಟಸಿ ಶಾಸಕ ಸುನಿಲ್ ಕುಮಾರ್

ಕಾರ್ಕಳ,ಸೆ.12: ಜನ ಸಾಮಾನ್ಯರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆಯುವುದನ್ನು ತಪ್ಪಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಇಂತಹ ಪ್ರಜಾಸೇವೆ ಆಂದೋಲನ ಸಭೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಸೆ.12…

ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 18 ಕೋ.ರೂ ಅನುದಾನ ಬಿಡುಗಡೆ : ಶಾಸಕ ವಿ ಸುನಿಲ್‌ ಕುಮಾರ್ ಮಾಹಿತಿ

ಕಾರ್ಕಳ,ಸೆ.12:ಕರಾವಳಿ ಮತ್ತು ಮಲೆನಾಡಿನ ಸಂಪರ್ಕ ಸೇತು ಆಗಿರುವ ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ಸಹಿತ ಆಗುಂಬೆಯಿಂದ ಹೆಬ್ರಿ ಪೇಟೆಯಿಂದ ದೇವಸ್ಥಾನದ ತನಕ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ವತಿಯಿಂದ 18 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ…