Author: karavalinews

ವೇದಗಣಿತ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ  ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸನ್ಮಾನ

ಕಾರ್ಕಳ, ಫೆ.17: ಕಾರ್ಕಳ ತಾಲೂಕಿನ ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಜನರೇಶನ್ ನೆಕ್ಸ್ಟ್ ಇವರ ವತಿಯಿಂದ ರಾಜ್ಯಮಟ್ಟದ ಅಬಾಕಸ್ ಮತ್ತು ವೇದಗಣಿತ ಪರೀಕ್ಷೆಯನ್ನು ನಡೆಸಿದ್ದು ಈ ಪರೀಕ್ಷೆಯಲ್ಲಿ 43 ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ ನಾಲ್ಕು ವಿದ್ಯಾರ್ಥಿಗಳು ರಾಂಕ್…

ಕಾರ್ಕಳ: ಕೌಟುಂಬಿಕ ಕಲಹ: ಹಲ್ಲೆ ನಡೆಸಿ, ಬೆದರಿಕೆ ಹಾಕಿರುವುದಾಗಿ ದೂರು, ಪ್ರತಿದೂರು ದಾಖಲು

ಕಾರ್ಕಳ, ಫೆ.17: ಕೌಟುಂಬಿಕ ಕಲಹದಲ್ಲಿ ಪರಸ್ಪರ ಹಲ್ಲೆ ನಡೆಸಿ, ಬೆದರಿಕೆ ಹಾಕಿರುವುದಾಗಿ ಕಾರ್ಕಳ ನಗರ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದೆ. ಕಾರ್ಕಳ ಕಸಬಾ ಗ್ರಾಮದ ಶಾಂತಮಣಿ ಅವರ ಮಗ ಕುಮಾರ@ ಅಂಗಸ್ವಾಮಿ ಮತ್ತು ಅವರ ಪತ್ನಿ ಸೌಮ್ಯ ಅವರಿಗೆ ಕೌಟುಂಬಿಕ…

ಬೈಲೂರು ಶಾಲೆ ಅಭಿವೃದ್ಧಿಗೆ ಶಾಸಕ ಸುನಿಲ್ ಕುಮಾರ್ ಅವರಿಗೆ ಮನವಿ

ಕಾರ್ಕಳ,ಫೆ.17: ಕಾರ್ಕಳದ ಶಾಸಕರಾದ ವಿ. ಸುನಿಲ್ ಕುಮಾರ್ ಅವರು ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈನ್ ಇಲ್ಲಿಗೆ ಭೇಟಿ ನೀಡಿದ ಸಂದರ್ಭ ಶಾಲೆಯ ಶೈಕ್ಷಣಿಕ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲಾಯಿತು. ​ಈ…

ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ಪೂರ್ವಸಿದ್ದತಾ ಸಭೆ

ಕಾರ್ಕಳ,ಫೆ.16 : 2027 ರಲ್ಲಿ ಕಾರ್ಕಳದ ಬಾಹುಬಲಿ ಮಹಾ ಮಸ್ತಕಾಭಿಷೇಕ ನಡೆಯಲಿದ್ದು, ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಮಸ್ತಕಾಭಿಷೇಕಕ್ಕೆ ದೇಶ ವಿದೇಶಗಳಿಂದ ಸಹಸ್ರಾರು ಯಾತ್ರಾತ್ರಿಗಳು, ಪ್ರವಾಸಿಗರು ಕಾರ್ಕಳ ಕ್ಷೇತ್ರಕ್ಕೆ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಐತಿಹಾಸಿಕ ಕಾರ್ಯಕ್ರಮದ ಪೂರ್ವಭಾವಿಯಾಗಿ ಬಾಹುಬಲಿ ಸ್ವಾಮಿಯ…

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರ: ಏ. 7ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ

ನವದೆಹಲಿ, ಫೆ.16: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಮರುಪರಿಶೀಲನಾ ಅರ್ಜಿಗಳ ವಿಚಾರಣೆಗೆ ಒಪ್ಪಿಗೆ ನೀಡಿದ್ದು, ಏಪ್ರಿಲ್ 7ರಿಂದ ವಿಚಾರಣೆ ಆರಂಭವಾಗಲಿದೆ. 2018ರಲ್ಲಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ಮಹಿಳೆಯರಿಗೆ ಶಬರಿಮಲೆಗೆ ಪ್ರವೇಶಕ್ಕೆ ಅವಕಾಶ ನೀಡಿ ತೀರ್ಪು…

ದರ್ಕಾಸ್ತು ಹಕ್ಕುಪತ್ರ ಮಂಜೂರಾತಿಯ ಪೋಡಿ ಅಂದೋಲನ ಯಶಸ್ವಿ: ಕಾರ್ಕಳ ತಹಶಿಲ್ದಾರ್ ಪ್ರದೀಪ್ ಆರ್ ಅವರಿಗೆ ಕಂದಾಯ ಇಲಾಖೆಯ ವತಿಯಿಂದ ಅಭಿನಂದನೆ

ಕಾರ್ಕಳ, ಫೆ.15: ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲಿ ಒಂದಾದ ಕಂದಾಯ ಇಲಾಖೆಯ ಹಕ್ಕುಪತ್ರ ದರ್ಕಾಸ್ತು ಮಂಜೂರಾತಿ ಪ್ರಕರಣದ ಅತ್ಯುತ್ತಮ ಪೋಡಿ (ಪ್ಲಾಟಿಂಗ್ )ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ಕಾರ್ಕಳ ಕಂದಾಯ ಇಲಾಖೆ ಅತ್ಯುತ್ತಮ ಸಾಧನೆ ಮಾಡಿದೆ. ರಾಜ್ಯದ 236 ತಾಲೂಕುಗಳ ಪೈಕಿ 15 ತಾಲೂಕುಗಳು…

ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶಿವರಾತ್ರಿ ಆಚರಣೆ

ಹೆಬ್ರಿ,ಫೆ.15 : ಮುನಿಯಾಲಿನ ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶಿವರಾತ್ರಿ ಪ್ರಯುಕ್ತ ಪ್ರಾರ್ಥನೆ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಪಾರಾಯಣ, ಮಹಾಪೂಜೆ, ಅನ್ನಸಂತರ್ಪಣೆ ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ಗುಡ್ಡೆಅಂಗಡಿ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ, ಆಡಳಿತ ಮೊಕ್ತೇಸರ ಚಿರಂಜಿತು ಅಜಿಲ…

ಮುಳ್ಕಾಡು ಪ್ರಾಥಮಿಕ ಶಾಲೆಯಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕೊಠಡಿಗಳಿಗೆ ಶಿಲಾನ್ಯಾಸ, ಪುಣ್ಯಕೋಟಿ ವನದ ಉದ್ಘಾಟನೆ

ಕಾರ್ಕಳ,ಫೆ.15: ತಾಲೂಕಿನ ಕಡ್ತಲ ಪಂಚಾಯತ್ ವ್ಯಾಪ್ತಿಯ ಮುಳ್ಕಾಡು ಎಳ್ಳಾರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯಿಂದ ಮಂಜೂರಾದ 25 ಲಕ್ಷ ವೆಚ್ಚದ ಎರಡು ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಶಾಲಾ ದಾನಿಗಳ ನೆರವಿನಿಂದ ಸಾಕಾರಗೊಂಡ…

ರೆಂಜಾಳ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಕಾರ್ಕಳ,ಫೆ.14: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಕಾರ್ಕಳ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಕಳ, ಇದರ ವತಿಯಿಂದ ಸರಕಾರಿ ಸಂಯುಕ್ತ ಪ್ರೌಢ ಶಾಲೆ ರೆಂಜಾಳ ಇಲ್ಲಿ ಮಕ್ಕಳಿಗೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಯಿತು.…

ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಸ್ಥಾನದಿಂದ ಸದಾಶಿವ ಶೆಟ್ಟಿಯವರನ್ನು ವಜಾಗೊಳಿಸಿದ ಸಹಾಯಕ ನಿಬಂಧಕರ ಆದೇಶ ರದ್ದುಪಡಿಸಿ ಹೈಕೋರ್ಟ್ ಆದೇಶ

ಕಾರ್ಕಳ, ಫೆ,14: ಬೋಳ ವ್ಯವಸಾಯ ಸಹಕಾರಿ ಸೇವಾ ಸಂಘದ ನಿರ್ದೇಶಕ ಸ್ಥಾನದಿಂದ ಬೋಳ ಸದಾಶಿವ ಶೆಟ್ಟಿಯವರನ್ನು ವಜಾಗೊಳಿಸಿದ್ದ ಕುಂದಾಪುರ ಉಪ ವಿಭಾಗದ ಸಹಾಯಕ ನಿಬಂಧಕರ ಆದೇಶವನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ. ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಸಂಘದ ನಿರ್ದೆಶಕರಾಗಿರುವ ಮುರುಳೀಧರ…