Author: karavalinews

ಯೋಗೀಶ್ ಗೌಡರ್ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಆಚೆ ಬಂದಿರುವ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್​ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.…

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; ಸಿಎಂ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ತಲೆದಂಡ

ಬೆಂಗಳೂರು : ಆರ್‌ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದ್ದು, ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ. ಗೋವಿಂದರಾಜು’ ಅಮಾನತುಗೊಳಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ…

ನಿವೃತ್ತ ಶಿಕ್ಷಕ ಹಿರ್ಗಾನ ಸದಾನಂದ ನಾಯಕ್ ನಿಧನ

ಕಾರ್ಕಳ: ನಿವೃತ್ತ ಶಿಕ್ಷಕ ಹಿರ್ಗಾನ ಗ್ರಾಮದ ನಿವಾಸಿ ಸದಾನಂದ ನಾಯಕ್(63) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಸದಾನಂದ ನಾಯಕ್ ಎಣ್ಣೆಹೊಳೆ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಬಳಿಕ ಕುಕ್ಕುಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಮೃತರು ಪತ್ನಿ ಕಿರಿಂಚಿಬೈಲು…

ಸಂರಕ್ಷಿತ ಸ್ಥಳಗಳ ಸುತ್ತಮುತ್ತ ನಿರ್ಮಾಣ ಕಾಮಗಾರಿಗಳಿಗೆ ಭಾರತೀಯ ಪುರಾತತ್ವ ಇಲಾಖೆಯ ಅನುಮತಿ ಕಡ್ಡಾಯ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಐತಿಹಾಸಿಕ ಸ್ಥಳಗಳು ಭಾರತೀಯ ಪುರಾತತ್ವ ಇಲಾಖೆಯ ಅಧೀನಕ್ಕೆ ಒಳಪಟ್ಟಿದ್ದು, ಅಂತಹ ಸ್ಥಳಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಗದಿಪಡಿಸಿದ ವ್ಯಾಪ್ತಿಯೊಳಗೆ ಯಾವುದೇ ನಿರ್ಮಾಣ ಕಾಮಗಾರಿಗೆ ಅವಕಾಶ ಇರುವುದಿಲ್ಲ, ಆದರೂ ಸಂರಕ್ಷಿತ ಸ್ಥಳಗಳ ಬಳಿ ನಿರ್ಮಾಣ ಚಟುವಟಿಕೆಗಳನ್ನು ನಡೆಸಲು ಪುರಾತತ್ವ ಇಲಾಖೆಯ ಅನುಮತಿ ಕಡ್ಡಾಯವಾಗಿದೆ…

ಕಾರ್ಕಳ: ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ: ಪರಿಸರ ಮಾಲಿನ್ಯದಿಂದ ಪ್ರಾಕೃತಿಕ ಮುನಿಸು ಉಂಟಾಗುತ್ತದೆ. ಮೊದಲು ನಮ್ಮ ಮನೆಯ ಸುತ್ತ ಸ್ವಚ್ಛ ಮಾಡಿಕೊಳ್ಳಬೇಕು, ನಂತರ ಶಾಲೆಯ ಆವರಣ ಮತ್ತು ಶಾಲಾ ಕೊಠಡಿಗಳನ್ನು ಸ್ವಚ್ಛಗೊಳಿಸಬೇಕು. ನೀರಿನ ಬಾಟಲ್‌ಗಳನ್ನು ಎಲ್ಲಂದರಲ್ಲಿ ಬಿಸಾಡಬಾರದು. ಪ್ಲಾಸ್ಟಿಕ್ ಬಳಕೆಯನ್ನು ನಿಷೇದಿಸಬೇಕು. ಆದಷ್ಟು ಗಿಡಗಳನ್ನು ನೆಟ್ಟು ಪೋಷಿಸಬೇಕು.ವಿಘಟನೆಗೊಳ್ಳದ…

ಹೆಬ್ರಿ: ವ್ಯಕ್ತಿ ನಾಪತ್ತೆ

ಹೆಬ್ರಿ: ಹೆಬ್ರಿಯ ತಮ್ಮ ಮನೆಯಿಂದ ಕೆಲಸಕ್ಕೆಂದು ಹೋದ ವ್ಯಕ್ತಿಯೊಬ್ಬರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ವಸಂತಿ ಎಂಬವರ ಪತಿ ಪ್ರಭಾಕರ(46ವರ್ಷ) ನಾಪತ್ತೆಯಾದವರು. ಪ್ರಭಾಕರ ಅವರು ಈ ಹಿಂದೆ ಸುಮಾರು 5-6 ಬಾರಿ ಮನೆಯಿಂದ ಕೆಲಸಕ್ಕೆಂದು ಹೋದವರು ಸುಮಾರು 2-3 ತಿಂಗಳವರೆಗೆ ಇದ್ದು…

ಬೆಂಗಳೂರು ಕಾಲ್ತುಳಿತ ಪ್ರಕರಣ ಸಿಐಡಿಗೆ: ಕಮಿಷನರ್, ಎಸಿಪಿ ಸೇರಿ ಹಲವು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರಿನ ಎಂ,ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೂನ್ 05 ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಘೋಷಣೆ ಮಾಡಿದರು. ಅಲ್ಲದೇ ಪ್ರಮುಖವಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ…

ನಿಟ್ಟೆ: ಕಚ್ಚಾ ಗೋಡಂಬಿ ನೀಡುವುದಾಗಿ ಹಣ ಪಡೆದು 17 ಲಕ್ಷಕ್ಕೂ ಮಿಕ್ಕಿ ವಂಚನೆ

ಕಾರ್ಕಳ: ಕಾರ್ಕಳದ ನಿಟ್ಟೆಯ ಗೇರುಬೀಜ ರಪ್ತು ಉದ್ದಿಮೆದಾರರೊಬ್ಬರಿಗೆ ಕಚ್ಚಾ ಗೇರುಬೀಜ ನೀಡುವುದಾಗಿ ಲಕ್ಷಾಂತರ ರೂ. ವಂಚನೆ ಎಸಗಿರುವ ಪ್ರಕರಣ ನಡೆದಿದೆ. ನಿಟ್ಟೆಯ ಬಿ ಶ್ರೀನಿವಾಸ ಅವರು M/S ಗಾಯತ್ರಿ ಎಕ್ಸ್ ಪೋರ್ಟ್ಸ್, ಗುಂಡ್ಯಡ್ಕ ಅತ್ತೂರು ನಾರ್ತ್, ಇದರ ಮ್ಯಾನೆಜಿಂಗ್ ಪಾರ್ಟನರ್ ಆಗಿದ್ದು…

ಬಿಜೆಪಿ ಮುಖಂಡ,ಪುತ್ತೂರು ನಗರ ಸಭೆಯ ಸದಸ್ಯನ ಶವ ನೀರಿನ ಟ್ಯಾಂಕಿನಲ್ಲಿ ಪತ್ತೆ: ರಮೇಶ್ ರೈ ಸಾವಿನ ಸುತ್ತ ಅನುಮಾನಗಳ ಹುತ್ತ

ಮಂಗಳೂರು: ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಹಾಗೂ ಪುತ್ತೂರು ನಗರ ಸಭೆಯ ಸದಸ್ಯ ರಮೇಶ್ ರೈ ಅವರು ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ರಮೇಶ್ ರೈ ಮನೆಯಿಂದ ನಾಪತ್ತೆಯಾಗಿದ್ದರು. ಬಳಿಕ ಪಾಣೆಮಂಗಳೂರು ಸೇತುವೆಯ ಬಳಿ…

ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರು: 2025 ರ ಐಪಿಎಲ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡದ ವಿಜಯೋತ್ಸವ ಆಚರಣೆಯ ಮೊದಲು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಬುಧವಾರ ಸಂಭವಿಸಿದ ಕಾಲ್ತುಳಿತದಿಂದ 11 ಅಮಾಯಕ ಜೀವಗಳು ಬಲಿಯಾದ ಘಟನೆಯ ಕುರಿತು ಕರ್ನಾಟಕ ಹೈಕೋರ್ಟ್ ಗುರುವಾರ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.…