Author: karavalinews

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮಂಡ್ಯ, ಜುಲೈ 26: ಇತ್ತೀಚೆಗಷ್ಟೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ 2028ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ ಎನ್ನುವ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದ್ದ…

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ಕಾರ್ಕಳದಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ: ಬಿಜೆಪಿಯವರು ಭಾರತ ಬಿಟ್ಟು ತೊಲಗಬೇಕು: ಮಂಜುನಾಥ ಪೂಜಾರಿ ಮುದ್ರಾಡಿ ಆಕ್ರೋಶ

ಕಾರ್ಕಳ,ಜು.26 :ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಲೀಕ್ ಮಾಡಿ ಕೋಟ್ಯಾಂತರ ವಿದ್ಯಾರ್ಥಿಗಳ ಬಾಳಿನಲ್ಲಿ ಚೆಲ್ಲಾಟವಾಡಿದ ಭ್ರಷ್ಟಾಚಾರ ಎಸಗಿ ಸಾಂವಿಧಾನಿಕ ಸಂಸ್ಥೆ ಸೇರಿದಂತೆ ಎಲ್ಲೆಡೆಯಲ್ಲೂ ಮೋದಿ ನೇತೃತ್ವದ ಭ್ರಷ್ಟ ಸರಕಾರದಿಂದ ಲೂಟಿ ನಡೆಯುತ್ತಿದೆ.ಆದ್ದರಿಂದ ಬಿಜೆಪಿಯವರು ಭಾರತ ಬಿಟ್ಟು ತೊಲಗಿ ಎನ್ನುವ ಚಳುವಳಿ ಮಾಡುವುದಾಗಿ…

ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ದರೆ 2ನೇ ವಿವಾಹ ಅನೂರ್ಜಿತ : ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು,ಜು.26: ಮುಸ್ಲಿಂ ವ್ಯಕ್ತಿಯೊಬ್ಬರ ಮೊದಲ ವಿವಾಹವು ರದ್ದಾಗದ ಹೊರತು, ಅವರು ವಿಶೇಷ ವಿವಾಹ ಕಾಯಿದೆಯಡಿ ಮಾಡಿಕೊಳ್ಳುವ ಎರಡನೇ ವಿವಾಹವು ಕಾನೂನುಬದ್ಧವಾಗಿ ಅನೂರ್ಜಿತಗೊಳ್ಳುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ವ್ಯಕ್ತಿಯ ಎರಡನೇ ಪತ್ನಿಯಾಗಿದ್ದ ಬಳ್ಳಾರಿಯ ಮೀನಾಕುಮಾರಿ ಎಂಬುವರು ಸಲ್ಲಿಸಿದ್ದ…

ಅಜೆಕಾರಿನಲ್ಲಿ ಮತ್ತೊಂದು ಆನ್‌ಲೈನ್ ಬ್ಯಾಂಕಿಂಗ್ ವಂಚನೆ: ನಿವೃತ್ತ ಉದ್ಯೋಗಿಯ ಬ್ಯಾಂಕ್ ಖಾತೆಯಿಂದ 3.73 ಲಕ್ಷ ದೋಚಿದ ವಂಚಕರು!

ಕಾರ್ಕಳ, ಜು.25: ಕಳೆದ ಕೆಲವು ದಿನಗಳ ಹಿಂದಷ್ಟೇ ಅಜೆಕಾರಿನ ರತ್ನಾಕರ ಅಮೀನ್ ಎಂಬವರ ಬ್ಯಾಂಕ್ ಖಾತೆಯಿಂದ ಆನ್‌ಲೈನ್ ವಂಚಕರು 6.80 ಲಕ್ಷ ರೂ ಹಣ ದೋಚಿದ ಬೆನ್ನಲ್ಲೇ ಇದೀಗ ಇಂತಹ ಮತ್ತೊಂದು ಬ್ಯಾಂಕಿಂಗ್ ವಂಚನೆ ಪ್ರಕರಣ ಬಯಲಾಗಿದೆ. ಅಜೆಕಾರಿನ ನಿವೃತ್ತ ಉದ್ಯೋಗಿಯೊಬ್ಬರಿಗೆ…

ಮಾಧ್ಯಮ ಪ್ರತಿನಿಧಿಗಳಿಗೆ ಪೊಲೀಸ್ ಮಾಹಿತಿ ಕಾರ್ಯಾಗಾರ:ಆಧಾರರಹಿತ ಸುಳ್ಳು ಸುದ್ದಿಗಳನ್ನು ಪ್ರಕಟಿಸುವುದು ಶಿಕ್ಷಾರ್ಹ ಅಪರಾಧ: ಪಿಎಸ್ಐ ಪ್ರಸನ್ನ ಎಂ.ಸ್

ಕಾರ್ಕಳ, ಜು. 25: ಆಧಾರರಹಿತ, ಸುಳ್ಳು ಸುದ್ದಿ, ವ್ಯಕ್ತಿಯ ತೇಜೋವಧೆ ಮಾಡುವ ಅಥವಾ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸುದ್ದಿಗಳು ಅಥವಾ ಪೋಸ್ಟ್‌ಗಳು ಮತ್ತು ಸಂದೇಶಗಳನ್ನು ಪ್ರಸಾರ ಮಾಡುವುದು ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಕಾರ್ಕಳ ಗ್ರಾಮಾಂತರ ಠಾಣೆಯ ಪಿಎಸ್ಐ ಪ್ರಸನ್ನ ಎಂ.ಎಸ್ ಹೇಳಿದರು.…

ನಂದಳಿಕೆ ಶ್ರೀಗುರು ದುರ್ಗಾ ಮಿತ್ರ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸತೀಶ್. ಕೆ, ಕಾರ್ಯದರ್ಶಿಯಾಗಿ ಅನಿತ ಮೊಲಿ ಡಿಸೋಜ ಆಯ್ಕೆ

ಕಾರ್ಕಳ,ಜು.25: ಸ್ಥಳೀಯವಾಗಿ ಸಮಾಜಮುಖಿ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಂದಳಿಕೆ ಶ್ರೀಗುರು ದುರ್ಗಾ ಮಿತ್ರ ಮಂಡಳಿ ನಂದಳಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಮುಂದಿನ ಎರಡು ವರ್ಷಗಳ ಅವಧಿಯ ಕಾರ್ಯಚಟುವಟಿಕೆಗಳಿಗಾಗಿ ನೂತನ ಸಮಿತಿಯನ್ನು ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಸತೀಶ್…

ಅಜೆಕಾರು : ತಪ್ತ ಮುದ್ರಾಧಾರಣೆ

ಹೆಬ್ರಿ,ಜು.25: : ಆಷಾಢ ಮಾಸದ ಶುಕ್ಲ ಪಕ್ಷದ ಏಕಾದಶಿಯಂದು ಸುದರ್ಶನ ಹೋಮವನ್ನು ಆಚರಿಸಿ ಶಾಸ್ತ್ರೋಕ್ತ ಕ್ರಮದಲ್ಲಿ ಚಕ್ರಾದಿಗಳನ್ನು ಪೂಜಿಸಿ, ಅಭಿಮಾನಿ ದೇವತೆಗಳನ್ನು ಸ್ಮರಿಸಿ, ತಮೋರಜೋಗುಣಗಳನ್ನು ನಾಶಪಡಿಸುವಂತೆ ಪ್ರಾರ್ಥಿಸಿ ಏಕಾಗ್ರಚಿತ್ತದಿಂದ ಗುರುಗಳಿಂದ ತಪ್ತಮುದ್ರಾಧಾರಣವನ್ನು ಪಡೆದುಕೊಳ್ಳಬೇಕು. ಪ್ರಥಮೈಕಾದಶೀ ಪ್ರಯುಕ್ತ (ಜು. 25) ಅಜೆಕಾರು ಗುಡ್ಡೆಅಂಗಡಿ…

ಸೂರಾಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ತಾರಾನಾಥ್ ಕೋಟ್ಯಾನ್ ಸೂರಾಲು, ಕಾರ್ಯದರ್ಶಿಯಾಗಿ ಮಂಜುನಾಥ್ ಕೋಟ್ಯಾನ್ ಆಯ್ಕೆ

ಕಾರ್ಕಳ,ಜು.25: : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ(ರಿ.) ಸೂರಾಲು ಇದರ ಮಹಾಸಭೆಯಲ್ಲಿ 34ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಿತಿಗೆ ಅಧ್ಯಕ್ಷರಾಗಿ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರು,ಕಾರ್ಕಳ ತಾಲೂಕು ಭೂನ್ಯಾಯ ಮಂಡಳಿಯ ಸದಸ್ಯರು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿರುವ…

ಕೃಷಿ ಪಂಡಿತ ಪ್ರಶಸ್ತಿ ಹಾಗೂ ಭತ್ತದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

ಕಾರ್ಕಳ,ಜು.25: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ…

ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ, ಜು.25: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಕೇಂದ್ರ ಸಚಿವರಾದ…