Author: karavalinews

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನೀರುಪಾಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಜೊತೆಗೆ ಕಡಲಬ್ಬರ ಕೂಡ ಜೋರಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲಾಡಳಿತ ಮೀನುಗಾರಿಕೆ ನಿರ್ಭಂದಿಸಿದೆ. ಆದರೆ, ಮಂಗಳೂರು ಕಡಲತೀರದ ತೋಟಬೆಂಗ್ರೆ ಅಳಿವೆ ಬಾಗಿಲು ಬಳಿ ನಿಯಮ ಮೀರಿ…

ಕಾರ್ಕಳ ಪುರಸಭೆ ವತಿಯಿಂದ ಪ್ರಾಕೃತಿಕ ವಿಕೋಪ ಮತ್ತು ಡೆಂಗ್ಯೂ ಜ್ವರ ನಿಯಂತ್ರಣ ಸಭೆ

ಕಾರ್ಕಳ: ಮಳೆಗಾಲದಲ್ಲಿ ಸಂಭವಿಸಿಬಹುದಾದ ಪ್ರಾಕೃತಿಕ ವಿಕೋಪ ಹಾಗೂ ಮಲೇರಿಯಾ ನಿಯಂತ್ರಣ ಕುರಿತು ಕಾರ್ಕಳ ಪುರಸಭಾಧ್ಯಕ್ಷ ಯೋಗೀಶ್ ದೇವಾಡಿಗ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪುರಸಭಾ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿರುವ ಬಗ್ಗೆ ಅಧ್ಯಕ್ಷರು ಪ್ರಸ್ತಾಪಿಸಿದರು. ಈ ಕುರಿತು ತಾಲೂಕು ಆರೋಗ್ಯಾಧಿಕಾರಿ ಮಾತನಾಡಿ, ಪ್ರಸ್ತುತ…

ಶಿರ್ಲಾಲಿನಲ್ಲಿ ಆನೆ ದಾಳಿಯಿಂದ ಹಾನಿಗೊಳಗಾದ ತೋಟಕ್ಕೆ ತಹಶಿಲ್ದಾರ್ ಭೇಟಿ

ಕಾರ್ಕಳ: ಶಿರ್ಲಾಲು ಗ್ರಾಮದ ಹಾರಾಡಿ ಮಾಣಿಬೆಟ್ಟು ಎಂಬಲ್ಲಿನ ಕೃಷಿಕ ಕೊರಗ ನಾಯ್ಕ ಎಂಬುವವರ ತೋಟಕ್ಕೆ ಗುರುವಾರ ರಾತ್ರಿ ಕಾಡಾನೆ ದಾಳಿಯಿಂದ ಅಡಿಕೆ, ಬಾಳೆ ಕೃಷಿಗೆ ಹಾನಿಯಾಗಿದ್ದು ಕಾರ್ಕಳ ತಹಶಿಲ್ದಾರ್ ಪ್ರದೀಪ್ ಆರ್ ಭೇಟಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅಜೆಕಾರು ಕಂದಾಯ…

ನೀರೆ: ಹಾಡಹಗಲೇ ಮನೆಗೆ ನುಗ್ಗಿ ಆಭರಣ ಕಳವು

ಕಾರ್ಕಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡ ಹಗಲಿನಲ್ಲಿಯೇ ಮನೆಯ ಹಿಂಬಾಗಿಲನ್ನು ಮುರಿದು ಮನೆಯಲ್ಲಿದ್ದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವುಗೈದಿರುವ ಘಟನೆ ತಾಲೂಕಿನ ನೀರೆಯಲ್ಲಿ ಮೇ.28 ರಂದು ನಡೆದಿದೆ. ನೀರೆಯ ರಾಧಾಕೃಷ್ಣ, ಅವರ ಪತ್ನಿ ಮತ್ತು ಪುತ್ರಿ ಅಂದು ಬೆಳಗ್ಗೆ…

ಮಂಗಳೂರು: ಭಾರಿ ಮಳೆಗೆ ಮನೆಗಳ ಮೇಲೆ ಗುಡ್ಡ ಕುಸಿತ: ಬಾಲಕಿ ಸಾವು, ಅವಶೇಷಗಳಡಿ ಸಿಲುಕಿದ ಐವರ ರಕ್ಷಣೆಗೆ ಕಾರ್ಯಾಚರಣೆ

ಮಂಗಳೂರು: ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ದೇರಳೆಕಟ್ಟೆಯಲ್ಲಿ ಕಂಪೌಂಡ್…

ಶಿರ್ಲಾಲು ಪರಿಸರದಲ್ಲಿ ಮುಂದುವರಿದ ಒಂಟಿ‌ ಸಲಗದ ದಾಂಧಲೆ: ಅಡಿಕೆ ಕೃಷಿಗೆ ಹಾನಿ: ಆನೆ ಕಾಡಿಗಟ್ಟಲು ಅರಣ್ಯಾಧಿಕಾರಿಗಳ ಕಾರ್ಯಾಚರಣೆ

ಕಾರ್ಕಳ : ಶಿರ್ಲಾಲು ಗ್ರಾಮದಲ್ಲಿ ಕಾಡಾನೆ ಸಂಚಾರವು ಗ್ರಾಮಸ್ಥರ ನಿದ್ದೆಗೆಡಿಸಿದೆ. ಕಳೆದ ಒಂದು ವಾರದಿಂದ ಒಂಟಿ ಸಲಗವು ಸಿಕ್ಕ ಸಿಕ್ಕ ಕೃಷಿ ಬೆಳೆಗಳನ್ನು ನಾಶ ಮಾಡಿ ದಾಂಧಲೆ ನಡೆಸುತ್ತಿದ್ದು, ಜನರು ಮನೆಯಿಂದ ಹೊರಬರಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳ ಗುಂಪಿನಿಂದ ಬೇರ್ಪಟ್ಟ…

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4ರ ಮೀಸಲು ಮಸೂದೆಗೆ ರಾಜ್ಯಪಾಲರ ತಕರಾರು: ಮಸೂದೆಯನ್ನು ರಾಷ್ಟ್ರಪತಿಗೆ ಕಳುಹಿಸಲು ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು:ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ 4ರಷ್ಟು ಮೀಸಲಾತಿ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕದೇ ಎರಡನೇ ಬಾರಿಗೆ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ ಹಿಂದಿರುಗಿಸಿದ ಬಳಿಕ ಇದೀಗ ಸರ್ಕಾರವು ಈ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು…

ಭಾರೀ ಮಳೆಯಾಗುತ್ತಿರುವ ಹಿನ್ನಲೆ: ಇಂದು ಉಡುಪಿ ಜಿಲ್ಲೆಯ ಅಂಗನವಾಡಿ,ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಆದರೆ ಪೂರ್ವನಿಗದಿತ SSLC ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಸಮುದ್ರದಲ್ಲಿ ಭಾರೀ ಅಲೆಗಳು ಏಳುತ್ತಿದ್ದು ಮೀನುಗಾರರು ಕಡಲಿಗೆ ಇಳಿಯದಂತೆ…

ದಕ್ಷಿಣ ಕನ್ನಡದ ಪೊಲೀಸ್ ಆಯುಕ್ತ, ಎಸ್ಪಿ ವರ್ಗಾವಣೆ: ನೂತನ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ,ಎಸ್ಪಿಯಾಗಿ ಡಾ.ಅರುಣ್ ಕೆ ನೇಮಕ

ಬೆಂಗಳೂರು: ಕೋಮು ಸಂಘರ್ಷದಿಂದ ಬೆಂದಿರುವ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಖಡಕ್ ಅಧಿಕಾರಿಗಳ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅನುಪಮ್ ಅಗರ್ವಾಲ್ ಅವರನ್ನು…

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಹೊಟ್ಟೆಬಟ್ಟೆ ಕಟ್ಟಿಕೊಳ್ಳುವ ದುಸ್ಥಿತಿ ಮಂಗಳೂರಿನ ಜನರಿಗೆ ಬಂದಿಲ್ಲ: ಡಿಕೆಶಿ ವಿರುದ್ದ ಸುನಿಲ್ ವಾಗ್ದಾಳಿ

ಕಾರ್ಕಳ: ಕಾಂಗ್ರೆಸ್ ನವರ ಗ್ಯಾರಂಟಿಗಾಗಿ ಹೊಟ್ಟೆಬಟ್ಟೆ ಕಟ್ಟಿಕೊಳ್ಳುವ ದುಸ್ಥಿತಿ ಮಂಗಳೂರಿನ‌ ಜನರಿಗೆ ಬಂದಿಲ್ಲ. ಗ್ಯಾರಂಟಿ ಘೋಷಣೆಯ ಬಳಿಕವೂ ಉಡುಪಿ- ದಕ್ಷಿಣಕನ್ನಡದಲ್ಲಿ ಮಖಾಡೆ ಮಲಗಿರುವ ಕಾಂಗ್ರೆಸ್ ನ್ನು ಎಬ್ಬಿಸುವುದಕ್ಕೆ ವಿಶೇಷ ಯೋಜನೆ ರೂಪಿಸಿ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಡಿಸಿಎಂ ಡಿ.ಕೆ.ಶಿವಕುಮಾರ್…