ವಸ್ತ್ರ ಸಂಹಿತೆ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲೇ ಹಿಜಾಬ್ ಆದೇಶ ಹಿಂಪಡೆದಿದ್ದು ನ್ಯಾಯಾಂಗ ನಿಂದನೆಯಾಗುತ್ತದೆ: ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಆಕ್ರೋಶ
ಕಾರ್ಕಳ,ಮೇ.14:ಹಿಜಾಬ್ ನಿಷೇಧ ಆದೇಶ ವಾಪಾಸು ಪಡೆಯುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿಯನ್ನು ಬಹಿರಂಗಪಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಸಮಾನತೆ ಕಾಯುವ ನಿಟ್ಟಿನಲ್ಲಿ 2022ರಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೆ ತಂದಿತ್ತು.…
