Author: karavalinews

ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನ: ಸಿಸ್ಟರ್ ಪ್ರಭ ಬಂಧಿಸಿ, ಪೊಲೀಸರನ್ನು ಅಮಾನತು ಮಾಡಿ – ಆರ್.ಅಶೋಕ ಆಗ್ರಹ

ಬೆಂಗಳೂರು: ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭ ಅವರನ್ನು ಬಂಧಿಸಬೇಕು. ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕೆಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಶಾಲೆಯಲ್ಲಿ…

ನಕ್ಸಲ್ ಮುಖಂಡೆ ಶ್ರೀಮತಿಯ ಎರಡು ದಿನಗಳ ಪೊಲೀಸ್ ಕಸ್ಟಡಿ ಅಂತ್ಯ: ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶ

ಕಾರ್ಕಳ: ಈದು ಗ್ರಾಮದ ಗುಂಡಿ ಸದಾಶಿವ ಗೌಡನ ಹತ್ಯೆಯ ಪ್ರಮುಖ ಆರೋಪಿ ಇತ್ತೀಚೆಗಷ್ಟೇ ಕೇರಳ ಪೊಲೀಸರಿಂದ ಬಂಧಿತಳಾಗಿದ್ದ ಕುಖ್ಯಾತ ನಕ್ಸಲ್ ನಾಯಕಿ ಶ್ರೀಮತಿ(೨೮) ಎಂಬಾಕೆಯನ್ನು ಕಾರ್ಕಳ ಪೊಲೀಸರು ಬಾಡಿ ವಾರಂಟ್ ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಎರಡು ದಿನಗಳ ಪೊಲೀಸ್ ಕಸ್ಟಡಿ…

ಮಾಜಿ ಪ್ರಧಾನಿ ಎಚ್​ ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು: ಮಣಿಪಾಲ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯದ ಕಾರಣ ಮಾಜಿ ಪಿಎಂ ಎಚ್. ಡಿ ದೇವೇಗೌಡ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಗುರುವಾರ ಬೆಳಿಗ್ಗೆ ದೇವೇಗೌಡರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದೆ. ಅಲ್ಲಿನ ಶ್ವಾಸಕೋಶ…

ರಾಜ್ಯ ಸರ್ಕಾರ’ದಿಂದ ವಸತಿ ಶಾಲೆಗಳಲ್ಲಿ ‘ಧಾರ್ಮಿಕ ಹಬ್ಬ’ಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಾಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡದಂತೆ ನಿರ್ಬಂಧವನ್ನು ಹೇರಿ ಆದೇಶ ಹೊರಡಿಸಲಾಗಿತ್ತು. ವಿವಾದಕ್ಕೆ ಎಡೆಮಾಡಿಕೊಡುತ್ತಿದ್ದಂತೇ, ರಾಜ್ಯ ಸರ್ಕಾರ ಈ ಆದೇಶವನ್ನು ವಾಪಾಸ್ ಪಡೆದಿದೆ. ಈ ಸಂಬಂಧ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಹಿಂಪಡೆದ ಆದೇಶ…

ಕೇರಳದಲ್ಲಿ ಬಂಧಿತಳಾಗಿದ್ದ ನಕ್ಸಲ್ ಶ್ರೀಮತಿಯನ್ನು ಕಾರ್ಕಳ ಕೋರ್ಟಿಗೆ ಹಾಜರುಪಡಿಸಿದ ಪೊಲೀಸರು: ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ

ಕಾರ್ಕಳ: ಇತ್ತೀಚೆಗಷ್ಟೇ ಕೇರಳ ಪೊಲೀಸರಿಂದ ಬಂಧಿತಳಾಗಿದ್ದ ಕುಖ್ಯಾತ ನಕ್ಸಲ್ ನಾಯಕಿ ಶ್ರೀಮತಿ(26) ಎಂಬಾಕೆಯನ್ನು ಕಾರ್ಕಳ ಪೊಲೀಸರು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದಿದ್ದು ಅತ್ಯಂತ ಬಿಗುಭದ್ರತೆಯಲ್ಲಿ ಕಾರ್ಕಳದ ಕೋರ್ಟಿಗೆ ಹಾಜರುಪಡಿಸಿದರು. ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರೀಯರಾಗಿದ್ದ ಶೃಂಗೇರಿ ದೇವಳಕೊಪ್ಪ…

ಅಜೆಕಾರು: ಅಶಕ್ತರಿಗೆ ವೈದ್ಯಕೀಯ ನೆರವು ಕಾರ್ಯಕ್ರಮ: ಬಾಲ್ಯದಲ್ಲೇ ಮಕ್ಕಳಿಗೆ ಧರ್ಮ, ಸಂಸ್ಕೃತಿ, ರಾಷ್ಟ್ರೀಯತೆ ಕುರಿತು ಅರಿವು ಮೂಡಿಸುವ ಕೆಲಸವಾಗಬೇಕು: ಆಶಿಷ್ ಶೆಟ್ಟಿ

ಕಾರ್ಕಳ:ಮಕ್ಕಳಿಗೆ ಕೇವಲ ಬದುಕು ಕಟ್ಟಿಕೊಳ್ಳಲು ಶಿಕ್ಷಣ ಕೊಟ್ಟರೆ ಸಾಲದು,ಶಿಕ್ಷಣದ ಜತೆಗೆ ಸಂಸ್ಕೃತಿ, ಧಾರ್ಮಿಕ ವಿಚಾರಗಳು, ರಾಷ್ಟ್ರೀಯತೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಕಾರ್ಕಳ ಶಿರ್ಡಿ ಸಾಯಿಬಾಬ ಕಾಲೇಜು ಉಪನ್ಯಾಸಕ ಆಶಿಷ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಅಜೆಕಾರು ಶ್ರೀರಾಮ ಯಕ್ಷ ಕಲಾಭಿಮಾನಿ ಬಳಗದ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ: 15.02.2024,ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶರ ಋತು,ಕುಂಭ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಅಶ್ವಿನಿ, ರಾಹುಕಾಲ-02:13 ರಿಂದ 03:40 ಗುಳಿಕಕಾಲ-09:50 ರಿಂದ 11:18 ಸೂರ್ಯೋದಯ (ಉಡುಪಿ) 06:57 ಸೂರ್ಯಾಸ್ತ – 06:34 ದಿನವಿಶೇಷ: ಹೆಬ್ರಿ ರಥೋತ್ಸವ ರಾಶಿ ಭವಿಷ್ಯ: ಮೇಷ…

ಅಬುದಾಬಿಯಲ್ಲಿ ಮೊದಲ ‘ಹಿಂದೂ ದೇಗುಲ’ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಎರಡು ದಿನಗಳ ಅಬುಧಾಬಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಬುಧಾಬಿಯ ಮೊದಲ ಹಿಂದೂ ಶಿಲಾ ದೇವಾಲಯ, ಬೋಚಸನ್ವಾಸಿ ಶ್ರೀ ಅಕ್ಷರ್ ಪುರುಷೋತ್ತಮ್ ಸ್ವಾಮಿನಾರಾಯಣ್ ಸಂಸ್ಥೆ (ಬಿಎಪಿಎಸ್) ಮಂದಿರವನ್ನು ಉದ್ಘಾಟನೆ ಮಾಡಿದರು. ಅಬುಧಾಬಿಯಲ್ಲಿ 27 ಎಕರೆ ಭೂಮಿಯಲ್ಲಿ ನಿರ್ಮಿಸಲಾದ…

ಕಾರ್ಕಳ: ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದ ಎನ್ನುವ ಕಾರಣಕ್ಕೆ ಕತ್ತಿಯಿಂದ ಕಡಿದು ಕೊಲೆ ಯತ್ನ!

ಕಾರ್ಕಳ: ನ್ಯಾಯಾಲಯದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸಾಕ್ಷಿ ನುಡಿಯಲು ಹೋಗಿದ್ದ ಸಾಕ್ಷಿದಾರನಿಗೆ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಕಾರ್ಕಳದ ಅನಂತಶಯನದ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಹಳೆ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯ ನಡೆದಿದ್ದು, ಕಾರ್ಕಳ ಪೊಲೀಸರು ಕೊಲೆಯತ್ನ ಪ್ರಕರಣ…

ಮಕ್ಕಳು ಧಾರವಾಹಿ, ಸಿನಿಮಾಗಳಲ್ಲಿ ನಟಿಸಲು ಇನ್ನುಮುಂದೆ ಡಿಸಿ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಚಲನಚಿತ್ರಗಳು, ಸೀರಿಯಲ್ ಗಳಲ್ಲಿ ಮಕ್ಕಳು ನಟಿಸುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಅವರ ವಿದ್ಯಾಭ್ಯಾಸವು ಕುಂಠಿತಗೊಳ್ಳುತ್ತಿದೆ. ಈ ಕಾರಣದಿಂದಾಗಿ ಇನ್ನುಮುಂದೆ ಮಕ್ಕಳು ಸೀರಿಯಲ್, ಸಿನಿಮಾಗಳಲ್ಲಿ ನಟಿಸೋದಕ್ಕೆ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು…