Author: karavalinews

ಹಿರ್ಗಾನ:ಮಕ್ಕಳ ಹಕ್ಕುಗಳ ಸಪ್ತಾಹ – 2023-24: ಮಕ್ಕಳು ಅತಿಯಾದ ಮೊಬೈಲ್ ಬಳಕೆ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ

ಕಾರ್ಕಳ:ಪಡಿ ಸಂಸ್ಥೆ ಮಂಗಳೂರು, ಹಿರ್ಗಾನ ಗ್ರಾಮ ಪಂಚಾಯತ್ ಮತ್ತು ಶಿಕ್ಷಣ ಸಂಪನ್ಮೂಲ ಕೇಂದ್ರ ಕಾರ್ಕಳ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಾರ್ಯ ವಿಭಾಗ ಆಳ್ವಾಸ್ ವಿದ್ಯಾ ಸಂಸ್ಥೆ ಮೂಡುಬಿದಿರೆ ಇವುಗಳ ಸಹಯೋಗದಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ ಕಾರ್ಯಕ್ರಮವು ಚಿಕ್ಕಲ್…

ವಾರದೊಳಗೆ ಜಾತಿಗಣತಿ ವರದಿ ಸಿಎಂಗೆ ಸಲ್ಲಿಕೆ: ಜಯಪ್ರಕಾಶ್‌ ಹೆಗ್ಡೆ

ಬೆಂಗಳೂರು : ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಸಂಚಲನ ಮೂಡಿಸಿರುವ ಸಾಮಾಜಿಕ, ಶೈಕ್ಷಣಿ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು (ಜಾತಿ ಗಣತಿ ವರದಿ) ಈ ತಿಂಗಳ ಅಂತ್ಯದೊಳಗೆ ಸರ್ಕಾರಕ್ಕೆ ಸಲ್ಲಿಸುವುದಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ತಿಳಿಸಿದ್ದಾರೆ. ಸುದ್ದಿಗಾರರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.01.2024, ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ: ಪುನರ್ವಸು, ರಾಹುಕಾಲ-02:09 ರಿಂದ 03:35 ಗುಳಿಕಕಾಲ-09:59 ರಿಂದ 11:17 ಸೂರ್ಯೋದಯ (ಉಡುಪಿ) 07:01 ಸೂರ್ಯಾಸ್ತ – 06:27 ದಿನವಿಶೇಷ:ಹುಣ್ಣಿಮೆ, ರಾಮಕುಂಜ ರಥೋತ್ಸವ, ಕಡ್ತಲ ಸಿರಿಬೈಲು…

ರಕ್ಷಿತ್‌ ಪಡ್ರೆಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ ಪ್ರದಾನ: ಅಶಕ್ತರಿಗೆ ನೆರವು ನೀಡುವುದು ದೇವರ ಸೇವೆ: ಕೇಮಾರು ಶ್ರೀ

ಕಾರ್ಕಳ:ಬಡವರ ಕಣ್ಣೀರು ಒರೆಸಿದರೆ, ಅಶಕ್ತರಿಗೆ ಕೊಡುವ ಸಹಾಯ ದೇವರಿಗೆ ಸೇರುತ್ತದೆ. ಹೀಗಾಗಿ ಬಡವರಲ್ಲಿ ದೇವರನ್ನು ಕಾಣಬೇಕು ಎಂದು ಕೇಮಾರು ಸಾಂದೀಪನಿ ಆಶ್ರಮದ ಈಶ ವಿಠಲದಾಸ ಸ್ವಾಮೀಜಿ ಹೇಳಿದರು ‌ ಅವರು ಜ.22ರಂದು ಸೋಮವಾರ ಕಾರ್ಕಳ ಹಿರ್ಗಾನದ ಕುಂದೇಶ್ವರ ಕ್ಷೇತ್ರ ವತಿಯಿಂದ ವಾರ್ಷಿಕ…

ಪಶ್ಚಿಮ ಬಂಗಾಳ ಸಿಎಂ ಕಾರು ಅಪಘಾತ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಲೆಗೆ ಗಾಯ

ಕೊಲ್ಕೊತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಮಮತಾ ಅವರ ತಲೆಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.ಎದುರಿನಿAದ ಬರುತ್ತಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಡೆಯಲು ಯತ್ನಿಸಿದ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾರೆ. ಇದರಿಂದ ಮಮತಾ ಅವರ…

ಅಯೋಧ್ಯೆ ರಾಮ ಮಂದಿರ ಪ್ರತಿಷ್ಠಾಪನೆ:ಇನ್ನೂ 13 ದೇವಾಲಯಗಳ ಬೃಹತ್ ಯೋಜನೆ

ನವದೆಹಲಿ:ಅಯೋಧ್ಯೆಯನ್ನು ಜಾಗತಿಕ ಆಧ್ಯಾತ್ಮಿಕ ಪ್ರವಾಸಿ ಕೇಂದ್ರವನ್ನಾಗಿ ಮಾಡಲು ವಿಸ್ತಾರವಾದ ಯೋಜನೆಗಳು ಜಾರಿಯಲ್ಲಿವೆ. ಇದು ಕನಿಷ್ಟ 13 ಹೊಸ ದೇವಾಲಯಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ, ಅವುಗಳಲ್ಲಿ ಆರು ಬೃಹತ್ ದೇವಾಲಯದ ಸಂಕೀರ್ಣದ ಒಳಗೆ ಮತ್ತು ಏಳು ಹೊರಗಡೆ ಇರುತ್ತವೆ. ಯೋಜನೆಯ ಕುರಿತು ವಿವರಿಸಿದ ರಾಮ…

ಪ್ರಭಾವಿ ಸಚಿವ ಪ್ರಿಯಾಂಕ್‌ ಖರ್ಗೆ ಇಲಾಖೆಗೆ ಮೇಜರ್ ಸರ್ಜರಿ: ಗ್ರಾಮೀಣಾಭಿವೃದ್ಧಿ ಇಲಾಖೆಯ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ನಿವೃತ್ತ ನೌಕರರನ್ನು ವಜಾಗೊಳಿಸಿದ ಸಿಎಂ!

ಬೆಂಗಳೂರು: ರಾಜ್ಯದ ಅತ್ಯಂತ ಪ್ರಭಾವಿ ಸಚಿವ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ನಿರ್ವಹಿಸುತ್ತಿರುವ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಏಕಾಎಕಿ ಮೇಜರ್ ಸರ್ಜರಿ ಮಾಡಿ ಆದೇಶ ನೀಡಿರುವುದು ಅಚ್ಚರಿ ಮೂಡಿಸಿದೆ.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:24.01.2024, ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಹೇಮಂತ ಋತು,ಮಕರ ಮಾಸ, ಶುಕ್ಲ ಪಕ್ಷ,ನಕ್ಷತ್ರ: ಪುನರ್ವಸು, ರಾಹುಕಾಲ-12:43 ರಿಂದ 02:09 ಗುಳಿಕಕಾಲ-11:17 ರಿಂದ 12:43 ಸೂರ್ಯೋದಯ (ಉಡುಪಿ) 07:02 ಸೂರ್ಯಾಸ್ತ – 06:26 ದಿನವಿಶೇಷ: ಮಹಾನಕ್ಷತ್ರ ಶ್ರವಣ ಆರಂಭ ರಾಶಿ…

ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ: ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥಿಸೋಣ: ಡಾ. ಜೀವರ್ಗಿಸ್ ಮಾರ್ ಮಕಾರಿಯೋಸ್

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕ, ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಅಂಗವಾಗಿ ಮೂರನೇ ದಿನದ ಬಲಿಪೂಜೆ ನೆರವೇರಿತು. ವಾರ್ಷಿಕ ಮಹೋತ್ಸವದ ಪ್ರಮುಖ ಗಾಯನ ಬಲಿಪೂಜೆಯನ್ನು ಪುತ್ತೂರಿನ ಧರ್ಮಾಧ್ಯಕ್ಷರಾದ ಜೀವರ್ಗಿಸ್ ಮಾರ್ ಮಕಾರಿಯೋಸ್ ನೆರವೇರಿಸಿ ಪ್ರಲೋಭನೆಗೆ ಒಳಗಾಗದೆ ಅಚಲವಾಗಿ ಸರ್ವವನ್ನು ಎದುರಿಸಬೇಕು ಎಂದರು‌…

ವರಂಗ ವ್ಯವಸಾಯ ಸಹಕಾರಿ ಸಂಘದ ಕಿಟಕಿ ಸರಳು ಮುರಿದು ಕಳ್ಳತನಕ್ಕೆ ವಿಫಲ ಯತ್ನ

ಹೆಬ್ರಿ: ಹೆಬ್ರಿ ತಾಲೂಕಿನ ವರಂಗ ಗ್ರಾಮದ ವರಂಗ ಸಹಕಾರಿ ವ್ಯವಸಾಯಿಕ ಸಂಘದ ಹಿಂಬದಿಯ ಕಿಟಕಿಯ ಸರಳುಗಳನ್ನು ಕಳ್ಳರು ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ಭಾನುವಾರ ರಜಾದಿನ ಇದ್ದ ಕಾರಣದಿಂದ ಕಳ್ಳರು ಪೂರ್ವನಿಯೋಜಿತವಾಗಿ ಈ ಕೃತ್ಯ…