Author: karavalinews

ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಚರ್ಚೆ: 17,901 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ನವದೆಹಲಿ:ರಾಜ್ಯದಲ್ಲಿ ಉದ್ಭವಿಸಿರುವ ತೀವ್ರ ಬರದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬರ ಪರಿಸ್ಥಿತಿಯ ಕುರಿತು ವಿವರಿಸಿದರು. ಬರದಿಂದ ಅಪಾರ ಹಾನಿಯಾಗಿದ್ದು ಶೀಘ್ರವೇ 18,177 ಕೋಟಿ ರೂ. ಪರಿಹಾರ…

ಉಡುಪಿ ಧರ್ಮಪ್ರಾಂತ್ಯದಿಂದ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ದೇಣಿಗೆ

ಉಡುಪಿ, ಡಿ.19: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಮಂಗಳವಾರ ದೇಣಿಗೆ ನೀಡಲಾಯಿತು. ಉಡುಪಿ ಕಕ್ಕುಂಜೆಯ ಪಾಲನ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ…

ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯದ ಗೋಳು: ಸಾರ್ವಜನಿಕ ಸಮಸ್ಯೆಗಳ ಕುರಿತು ಉಡುಪಿ ಡಿಸಿ ಕಚೇರಿಯಲ್ಲಿ ಕುಂದುಕೊರತೆ ಸಭೆ

ಉಡುಪಿ, ಡಿಸೆಂಬರ್ 19 : ಸಾಣೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯ ಕುರಿತು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಮತ್ತು ಪ್ರಗತಿ ಪರಿಶೀಲನ ಸಭೆಯ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಾಣೂರು ಗ್ರಾಮದಲ್ಲಿ…

ಬಗರ್ ಹುಕುಂ ಅರ್ಜಿ ಸಲ್ಲಿಕೆಗೆ ಆ್ಯಪ್ ಬಿಡುಗಡೆ ಮಾಡಿದ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು,ಡಿ.19: ಸರ್ಕಾರಿ ಜಮೀನು ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್‌ ಬಿಡುಗಡೆ ಮಾಡಿದೆ. ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ…

ಲೋಕಸಭೆಯಲ್ಲಿ ಟೆಲಿಕಾಂ ಮಸೂದೆ ಮಂಡನೆ: ‘ರಾಷ್ಟ್ರೀಯ ಭದ್ರತೆ’ ಉಲ್ಲೇಖಿಸಿ ಸೇವೆ ಸ್ಥಗಿತಗೊಳಿಸಲು, ಸ್ವಾಧೀನಕ್ಕೆ ಅನುಮತಿ

ನವದೆಹಲಿ: ದೂರಸಂಪರ್ಕ ವಲಯವನ್ನು ನಿಯಂತ್ರಿಸುವ 138 ವರ್ಷಗಳಷ್ಟು ಹಳೆಯದಾದ ಭಾರತೀಯ ಟೆಲಿಗ್ರಾಫ್ ಕಾಯಿದೆಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಸೋಮವಾರ ದೂರಸಂಪರ್ಕ ಮಸೂದೆ 2023 ಅನ್ನು ಲೋಕಸಭೆಯಲ್ಲಿ ಮಂಡಿಸಿದೆ. ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು ಲೋಕಸಭೆಯಲ್ಲಿ ಟೆಲಿಕಾಂ ಮಸೂದೆಯನ್ನು…

ವಿಷಪ್ರಾಶನದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟೋರಿಯಸ್ ಉಗ್ರ ದಾವೂದ್ ಇಬ್ರಾಹಿಂ ಸಾವು: ದಾವೂದ್ ಸಾವಿನ ಸುದ್ದಿಯನ್ನು ಖಚಿತಪಡಿಸಿದ ಪಾಕ್ ಮಾಧ್ಯಮಗಳು!

ಕರಾಚಿ, ಡಿ.19: ಭಾರತದ ವಿರುದ್ಧ ಭೀಕರ ಬಾಂಬ್ ದಾಳಿ ಹಾಗೂ ಭಯೋತ್ಪಾದಕ ದಾಳಿ ನಡೆಸಿರುವ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿ ಅಗ್ರಸ್ಥಾನದಲ್ಲಿರುವ ಉಗ್ರ ದಾವೂದ್ ಇಬ್ರಾಹಿಂ ವಿಷಪ್ರಾಶನದಿಂದ ಆಸ್ಪತ್ರೆಗೆ ದಾಖಲಾಗಿದ್ದ,ಆದರೆ ಈತ ಮೃತಪಟ್ಟಿದ್ದಾನೆ ಎಂದು ಪಾಕಿಸ್ತಾನದ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ದಾವೂದ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:19.12.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಹೇಮಂತ ಋತು,ಮಾರ್ಗಶಿರ ಮಾಸ,(ಧನು) ಶುಕ್ಲ ಪಕ್ಷ , ನಕ್ಷತ್ರ:ಪೂರ್ವಾಭಾದ್ರ, ರಾಹುಕಾಲ- 03:18 ರಿಂದ 04:42 ಗುಳಿಕಕಾಲ-12:28 ರಿಂದ 01:53 ಸೂರ್ಯೋದಯ (ಉಡುಪಿ) 06:49 ಸೂರ್ಯಾಸ್ತ – 06:07 ರಾಶಿ ಭವಿಷ್ಯ ಮೇಷ…

ನೈತಿಕ ಮೌಲ್ಯಾಧಾರಿತ ಅಧ್ಯಯನ ಕುರಿತು ತಾಲೂಕು ಮಟ್ಟದ ಸ್ಪರ್ಧೆ: ಹೆಬ್ರಿ ಸರಕಾರಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ)ನಡೆಸಿದ ಪ್ರೌಢಶಾಲಾ ವಿಭಾಗದ ಜ್ಞಾನ ವಾರಿಧಿ ನೈತಿಕ ಮೌಲ್ಯಾಧಾರಿತ ಅಧ್ಯಯನ ಕುರಿತ ತಾಲೂಕು ಮಟ್ಟದಲ್ಲಿ ನಡೆದ ನಾಲ್ಕು ವಿಭಾಗದ ಸ್ಪರ್ಧೆಗಳ ಪೈಕಿ ಹೆಬ್ರಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು…

ಕಾಡು ಹಂದಿ ದಾಳಿಗೆ ರೈತ ಸ್ಥಳದಲ್ಲೇ ಸಾವು: ಇಬ್ಬರು ಮಹಿಳೆಯರ ಸ್ಥಿತಿ ಗಂಭೀರ

ಹಾಸನ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ ನಡೆಸಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಸೋಮವಾರ ಸಂಭವಿಸಿದೆ. ಹೊಳೇನರಸೀಪುರ ತಾಲೂಕಿನ ಹಾರಗೌಡನಹಳ್ಳಿಯಲ್ಲಿ ಜಮೀನಿನಲ್ಲಿ ರೈತ ರಾಜೇಗೌಡ(63) ಎಂಬವರು…

ಕಾಪು ಲೀಲಾಧರ ಶೆಟ್ಟಿ ದತ್ತುಪುತ್ರಿ ನಾಪತ್ತೆ ಪ್ರಕರಣ:ನಾಲ್ವರು ಆರೋಪಿಗಳ ಬಂಧನ:ಬಂಧಿತರ ವಿರುದ್ಧ ಪೋಕ್ಸೊ,ಅತ್ಯಾಚಾರ ಕೇಸ್

ಕಾಪು, ಡಿ.18:ಕಳೆದ ಕೆಲವು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿಯ ಅಪ್ರಾಪ್ತ ವಯಸ್ಸಿನ ಪುತ್ರಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಕಾಪು ಪೊಲೀಸರು ಕಾಸರಗೋಡಿನ ಕುಂಬಳೆ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ…