Author: karavalinews

ಮೂಡುಬಿದಿರೆ: ಸರಕಾರಿ ಬಸ್ ಸೌಕರ್ಯ ಒದಗಿಸಲು ಆಗ್ರಹ

ಮೂಡುಬಿದಿರೆ: ಮಂಗಳೂರು-ಮೂಡುಬಿದಿರೆ-ಕಾರ್ಕಳ ಮಾರ್ಗವಾಗಿ ಹಾಗೂ ಮೂಡುಬಿದಿರೆ ಕೇಂದ್ರಿತವಾಗಿ ಬೆಳ್ಮಣ್, ಶಿರ್ತಾಡಿ-ನಾರಾವಿ, ವೇಣೂರು-ಬೆಳ್ತಂಗಡಿ, ಬಿ.ಸಿ. ರೋಡ್ ಕಿನ್ನಿಗೋಳಿ, ಕಟೀಲು, ಇರುವೈಲು ಮಾರ್ಗಗಳಲ್ಲಿ ಸರಕಾರಿ ಬಸ್ ಸೌಕರ್ಯ ಒದಗಿಸಬೇಕು ಎಂದು ಜವನೆರ್ ಬೆದ್ರ’ದ ಸ್ಥಾಪಕಾಧ್ಯಕ್ಷ ಅಮರ್ ಕೋಟೆ ಆಗ್ರಹಿಸಿದ್ದಾರೆ. ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ…

ಸಿದ್ದರಾಮಯ್ಯರಿಂದ 24 ಹಿಂದೂಗಳ ಹತ್ಯೆ ಹೇಳಿಕೆ ಪ್ರಕರಣ: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಬಿಗ್ ರಿಲೀಫ್

ಬೆಂಗಳೂರು: ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಇತ್ತೀಚೆಗೆ…

ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ: ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್, ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್ ನೇಮಕ

ಬೆಂಗಳೂರು: ನೂತನ ಸರ್ಕಾರದ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪೈಕಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ…

ಗೃಹ ಲಕ್ಷ್ಮಿ ಯೋಜನೆ ನಿಯಮದಲ್ಲಿ ಮತ್ತೆ ಬದಲಾವಣೆ: ಮಕ್ಕಳು ತೆರಿಗೆ ಕಟ್ಟಿದರೂ ತಾಯಿಗೆ 2,000 ರೂ ಖಚಿತ!

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಉಚಿತ ಗ್ಯಾರೆಂಟಿ ಗೊಂದಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಕಾಂಗ್ರೆಸ್ ಗೃಹಲಕ್ಷ್ಮಿ ಯೋಜನೆಯ ಷರತ್ತಿನಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ನಿನ್ನೆ ಮಕ್ಕಳು ತೆರಿಗೆ ಕಟ್ಟಿದರೆ, ತಾಯಿ ಅಥವಾ ಆ ಕುಟುಂಬ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಾಗಲು…

ಕಾರ್ಕಳದಲ್ಲಿ ಕಾಂಗ್ರೆಸ್ ನಾಟಕೀಯ ಗೋಪೂಜೆ: ಗೋಹತ್ಯೆ ಕುರಿತು ಕಾಂಗ್ರೆಸ್ ನಾಯಕರು ತಮ್ಮ ನಿಲುವು ಸ್ಪಷ್ಟಪಡಿಸಲಿ: ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಸವಾಲು

ಕಾರ್ಕಳ : ಬಿಜೆಪಿ ಸರಕಾರ ತನ್ನ ಆಡಳಿತ ಅವಧಿಯಲ್ಲಿ ಗೋ ಹತ್ಯೆ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿತ್ತು. ಆದರೆ, ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಹತ್ತೇ ದಿನದಲ್ಲಿ ಯಾರದೋ ಒಲೈಕೆಗಾಗಿ ಗೋ ಹತ್ಯೆ ನಿಷೇಧ ಕಾಯಿದೆಯನ್ನು ವಾಪಾಸ್ ಪಡೆಯುವ ಹೇಳಿಕೆ ನೀಡಿದೆ.…

ಒಡಿಶಾದಲ್ಲಿ ಮತ್ತೊಂದು ಅವಘಡ: ಎಕ್ಸ್ಪ್ರೆಸ್ ರೈಲಿಗೆ ಹೊತ್ತಿಕೊಂಡ ಬೆಂಕಿ- ಪ್ರಯಾಣಿಕರು ಅಪಾಯದಿಂದ ಪಾರು

ಭುವನೇಶ್ವರ : ಒಡಿಶಾದಲ್ಲಿ ಕಳೆದ ವಾರ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 288 ಜನ ಬಲಿಯಾಗಿರುವ ದಾರುಣ ಘಟನೆಯನ್ನು ಇನ್ನೂ ದೇಶ ಮರೆತಿಲ್ಲ. ಈ ನಡುವೆ ಒಡಿಶಾದಲ್ಲೇ ಮತ್ತೊಂದು ಅವಘಡ ನಡೆದಿದೆ. ರೈಲೊಂದರ ಎಸಿ ಕೋಚ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಆದರೆ ಅದೃಷ್ಟವಶಾತ್…

ಸಮಾಜ ಸೇವಾ ಕೈಂಕರ್ಯದ ಮೂಲಕ ಹುಟ್ಟು ಹಬ್ಬದ ಆಚರಣೆ ಶ್ಲಾಘನೀಯ: ಕೇಮಾರು ಈಶವಿಠಲದಾಸ ಸ್ವಾಮೀಜಿ

ಕಾರ್ಕಳ : ಮಾನವನ ವ್ಯಕ್ತಿತ್ವಕ್ಕೆ ನಯ ವಿನಯತೆ ಭೂಷಣ. ಅಂತಹ ನಯ ವಿನಯತೆ ಮೈಗೂಡಿಸಿಕೊಂಡಿರುವ ಉದಯ ಶೆಟ್ಟಿ ಅವರು ರಕ್ತದಾನ ಶಿಬಿರ ಮತ್ತು ಸರಕಾರಿ ಶಾಲಾ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನ ಮುಂತಾದ ಸಮಾಜ ಸೇವೆಗಳ ಮೂಲಕ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ…

ಒಡಿಶಾ ರೈಲು ದುರಂತ: ರೈಲ್ವೆ ನೌಕರರ ಫೋನ್‌ಗಳು ಸಿಬಿಐ ವಶ​ಕ್ಕೆ

ಬಾಲಸೋರ್‌: ಕಳೆ​ದ ಶುಕ್ರವಾರ ನಡೆದ ಭೀಕರ ತ್ರಿವಳಿ ರೈಲು ದುರಂತದ ತನಿಖೆ ಹೊಣೆ ಹೊತ್ತಿರುವ ಸಿಬಿಐ ಸತತ 2 ದಿನ ತನಿಖೆ ನಡೆಸಿ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದಿದೆ. ಮಂಗಳವಾರ ಅಪಘಾತ ಸ್ಥಳಕ್ಕೆ ಎರಡು ಬಾರಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದ…

ಕುಂಟು ನೆಪ ನೀಡಿ ಗ್ಯಾರಂಟಿ ಅರ್ಜಿ ತಿರಸ್ಕರಿಸುವಂತಿಲ್ಲ : ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಬೆಂಗಳೂರು : ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು . ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯ…

ಗೋಹತ್ಯೆ ಹೇಳಿಕೆ: ಸಚಿವ ವೆಂಕಟೇಶ್‌ಗೆ ಕಾಂಗ್ರೆಸ್‌ ಹೈಕಮಾಂಡ್‌ ಎಚ್ಚರಿಕೆ

ನವದೆಹಲಿ: ಗೋ ಹತ್ಯೆ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿ ವಿವಾ​ದ​ಕ್ಕೀ​ಡಾ​ಗಿದ್ದ ಕರ್ನಾ​ಟಕ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್‌ಗೆ ಕಾಂಗ್ರೆಸ್‌ ಹೈಕಮಾಂಡ್‌ ಗುರುವಾರ ಛೀಮಾರಿ ಹಾಕಿದ್ದು, ಮಿತಿಯಲ್ಲಿರುವಂತೆ ಎಚ್ಚರಿಕೆ ನೀಡಿದೆ. ‘ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್‌…