ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜೂನ್ 23 ರಂದು ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಸೂರಜ್ ರೇವಣ್ಣಗೆ ಈಗ ಷರತ್ತಿನ ಮೇಲೆ ಜಾಮೀನು ನೀಡಲಾಗಿದೆ. ಪ್ರಕರಣ ನಡೆದು 29 ದಿನಗಳ ನಂತರ ಈಗ ಸೂರಜ್ ಗೆ ಜಾಮೀನು ಸಿಕ್ಕಿದೆ. ಸೂರಜ್ ವಿರುದ್ಧ ಇಬ್ಬರು ದೂರು ಸಲ್ಲಿಸಿದ್ದರು. ಇದರಲ್ಲಿ ಎರಡೂ ಕೇಸ್ ನಲ್ಲಿ ಜಾಮೀನು ಮಂಜೂರಾಗಿದೆ. ನ್ಯಾ.ಸಂತೋಷ್ ಗಜಾನನ ಭಟ್ ಅವರಿಂದ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಬಿದ್ದಿದೆ.
ಹಾಸನ ಜಿಲ್ಲೆಯ ಜೆಡಿಎಸ್ ಪಕ್ಷದ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಸೂರಜ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಸಿಐಡಿ ಈ ಪ್ರಕರಣದ ತನಿಖೆ ನಡೆಸುತ್ತಿದೆ.
