
ಬೆಂಗಳೂರು,ಮೇ23: ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಭಾರತದಲ್ಲಿ ಇದುವರೆಗೆ ಎಬೋಲಾ ಪ್ರಕರಣ ಕಂಡುಬAದಿಲ್ಲವಾದರೂ ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಬೋಲಾ ವೈರಸ್ ಹರಡದಂತೆ ತಡೆಯಲು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಎಬೋಲಾ ಪೀಡಿತ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು ಕನಿಷ್ಠ 21 ದಿನಗಳ ಕಾಲ ಕ್ವಾರಂಟೈನ್ ಹಾಗೂ ರೋಗಲಕ್ಷಣ ಕಂಡುಬAದರೆ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ವರದಿ ವರದಿಮಾಡಿಕೊಳ್ಳಲು ಸೂಚಿಸಲಾಗಿದೆ ಹಾಗೂ ರಾಜ್ಯ ಆರೋಗ್ಯ ಇಲಾಖೆ ಎಬೋಲಾ ಚಿಕಿತ್ಸೆಗೆ ಆಸ್ಪತ್ರೆಗಳನ್ನು ಸಹ ಗುರುತಿಸಿದೆ.
ತೀವ್ರ ಜ್ವರ ಮತ್ತು ತಲೆನೋವು, ಸ್ನಾಯು ನೋವು ಮತ್ತು ಗಂಟಲು ನೋವು, ವಾಂತಿ, ಅತಿಸಾರ ಮತ್ತು ಹೊಟ್ಟೆ ನೋವು, ದದ್ದುಗಳು ಹಾಗೂ ಕಣ್ಣು ಕೆಂಪಾಗುವುದು. ಇವು ಎಬೋಲಾ ವೈರಸ್ ಲಕ್ಷಣಗಳು. ಸೋಂಕಿತ ವ್ಯಕ್ತಿಯ ರಕ್ತ, ಅಂಗಾAಗಗಳು ಅಥವಾ ದೇಹದ ದ್ರವಗಳೊಂದಿಗೆ ನೇರ ಸಂಪರ್ಕ ಹೊಂದುವುದರಿAದ ಅಥವಾ ಕಲುಷಿತಗೊಂಡ ಬಟ್ಟೆ, ಹಾಸಿಗೆ ಮತ್ತು ಸಿರಿಂಜ್ಗಳ ಮೂಲಕ ಈ ರೋಗ ಹರಡುತ್ತದೆ. ಆರೋಗ್ಯ ಸಿಬ್ಬಂದಿ ಮತ್ತು ರೋಗಿಯ ಕುಟುಂಬಸ್ಥರಿಗೆ ಸೋಂಕಿನ ಅಪಾಯ ಹೆಚ್ಚಿರುತ್ತದೆ.



.
.
.
.
.
.
.
.
.
.
.
.
.
.
.
.
.
.
.
.
