ಮಂಗಳೂರು:ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಜುಲೈ 15) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಸೇರಿದಂತೆ ಪದವಿ ಪೂರ್ವ ತರಗತಿಯವರೆಗೆ ರಜೆ ಘೋಷಿಸಲಾಗಿದೆ ಮುಂದಿನ ಐದು ದಿನಗಳವರೆಗೆ ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿದೆ ಹಾಗೂ ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗಳು ಹೇಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.














