ಕಾರ್ಕಳ: ಸ್ವೀಪ್ ಸಮಿತಿ ವತಿಯಿಂದ ಕಾರ್ಕಳ ತಾಲೂಕಿನ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗ ಮುರತ್ತಂಗಡಿ, ಸಾಣೂರು ಇಲ್ಲಿನ ವಿದ್ಯಾರ್ಥಿಗಳ ಪೋಷಕರಿಗೆ ಏ.8ರಂದು ಬೀದಿ ನಾಟಕದ ಮೂಲಕ ಮತದಾನದ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಕಳ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್ ಕಾರ್ಕಳ ಗುರುಶಾಂತಪ್ಪ ಬೆಳ್ಳುಂಡಗಿ ಅವರು, ಭಾರತ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, 18 ವರ್ಷ ತುಂಬಿದ ಎಲ್ಲರಿಗೂ ಮತದಾನದ ಹಕ್ಕು ನೀಡಲಾಗಿದೆ ಜನರಿಗೆ ಹಲವಾರು ಹಕ್ಕುಗಳನ್ನು ನೀಡಿರುತ್ತದೆ ಜತೆಗೆ ಮತದಾನದ ಹಕ್ಕನ್ನು ನೀಡಿದ್ದು ಯಾವುದೇ ಆಮಿಷಗಳಿಗೆ ಒಳಗಾಗದೇ ಯೋಗ್ಯ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ಮೂಲಕ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಕರೆ ನೀಡಿದರು. ಸಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆ ಎಪ್ರಿಲ್ 26 ರಂದು ನಡೆಯಲಿದ್ದು ಎಲ್ಲರೂ ತಪ್ಪದೇ ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿದರು.
ಪ್ರೌಢಶಾಲಾ ವಿದ್ಯಾರ್ಥಿಗಳು ಮತದಾನದ ಜಾಗೃತಿಗೆ ಕುರಿತಂತೆ ಬೀದಿ ನಾಟಕವನ್ನು ಪ್ರಸ್ತುತ ಪಡಿಸಿದರು. ಹಾಗೂ ಮತದಾನದ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಕಾರ್ಯಕ್ರಮದಲ್ಲಿ ಹರೀಶ್ ಕೆ.ಬಿ. ಸಹಾಯಕ ನಿರ್ದೇಶಕರು (ಪಂ.ರಾ), ಮಧು ಎಮ್.ಸಿ. ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಾಣೂರು ಗ್ರಾಮ ಪಂಚಾಯತ್, ಸುಚೇತ, ಪ್ರಾಂಶುಪಾಲರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ, ಗಣೇಶ್ ಮೊಗವೀರ, ಶಾಲಾ ಮುಖ್ಯೋಪಾಧ್ಯಾಯರು, ಎಲ್ಲಾಶಾಲಾ ಸಹ ಶಿಕ್ಷಕರು, SDMC ಅಧ್ಯಕ್ಷರು, ಸದಸ್ಯರು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ಧರು.