Share this news

 

 

 

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಶೇಕಡ 40 ರಷ್ಟು ದರ ಏರಿಕೆ ಕಂಡಿರುವ ಕರಿಮೆಣಸು (Black pepper), ಪೂರೈಕೆ ಕೊರತೆ ಮತ್ತು ಬೇಡಿಕೆ ಹೆಚ್ಚಳದ ಪರಿಣಾಮ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕಾಳು ಮೆಣಸು ದರ ಕೆಜಿಗೆ 900 ರಿಂದ 1,100 ರೂಪಾಯಿವರೆಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯೊಂದು ತಿಳಿಸಿದೆ. ಕರ್ನಾಟಕದಲ್ಲಿ ಹವಾಮಾನ ಬದಲಾವಣೆ, ಅಕಾಲಿಕ ಮಳೆ, ಬೆಳೆಗೆ ರೋಗಬಾಧೆ ಇತ್ಯಾದಿ ಕಾರಣಗಳಿಂದ ಬೆಳೆ ಕುಸಿತವಾಗಿದೆ.

ವಿಯೆಟ್ನಾಂ ಮತ್ತು ಬ್ರೆಜಿಲ್‌ನಂತಹ ದೇಶಗಳಲ್ಲಿ ಕೊಯ್ಲು ಕಡಿಮೆಯಾಗುವುದರಿಂದ ಜಾಗತಿಕ ಪೂರೈಕೆ ಬಿಕ್ಕಟ್ಟು ಉಂಟಾಗಿದ್ದು, ಬೆಲೆಗಳ ಮೇಲೆ ಒತ್ತಡ ಹೆಚ್ಚಿದೆ ಎಂದು ಕರ್ನಾಟಕ ಸಾಂಬಾರು ಸಂಘ ಮತ್ತು ಚಿಕ್ಕಮಗಳೂರು ಪ್ಲಾಂಟರ್ಸ್ ಅಸೋಸಿಯೇಷನ್‌ನ ಪ್ಲಾಂಟರ್ಸ್ ಅಸೋಸಿಯೇಷನ್‌ನ ಪ್ಲಾಂಟರ್ಸ್ ಹೇಳಿದ್ದಾರೆ.

ಕಾಳು ಮೆಣಸು ಬೆಳೆಗೆ ತೇವಾಂಶವುಳ್ಳ ಗಾಳಿ, ನೆರಳು ಪ್ರದೇಶ ಮತ್ತು ಚೆನ್ನಾಗಿ ನೀರಿನ ಅಂಶವಿರುವ ಮಣ್ಣು ಬೇಕಾಗುತ್ತದೆ. ಪಶ್ಚಿಮ ಘಟ್ಟಗಳು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕರಿಮೆಣಸು ಉತ್ಪಾದನೆಗೆ ಪೂರಕ ವಾತಾವರಣ ಇವೆ. ಆದರೂ, ಕರ್ನಾಟಕದ ಅತಿಹೆಚ್ಚು ಕರಿಮೆಣಸು ಬೆಳೆಯುವ ಪ್ರದೇಶಗಳಾದ ಕೊಡಗು, ಚಿಕ್ಕಮಗಳೂರುಗಳಲ್ಲಿ ಹವಾಮಾನ ಬದಲಾವಣೆಯ ಹೊಡೆತ ಬಿದ್ದಿದೆ. ಇದರಿಂದಾಗಿ ಬೆಳೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳುವುದು ಕಷ್ಟಕರವಾಗಿ ಪರಿಣಮಿಸಿದೆ ಎಂದು ಕೃಷಿಕರು ತಿಳಿಸಿದ್ದಾರೆ.

 

 

 

 

 

 

 

 

 

Leave a Reply

Your email address will not be published. Required fields are marked *