ಕಾರ್ಕಳ: ತಾಲೂಕಿನ ಬೋಳ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಂಘದ ವತಿಯಿಂದ ಪ್ರಪ್ರಥಮ ಬಾರಿಗೆ ಬೋಳ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಕೊಳಲ ಬಾಕ್ಯಾರಿನಲ್ಲಿ ಗರಡಿ ಮನೆ ಹರೀಶ್ ಪೂಜಾರಿಯವರ ಸಂಚಾಲಕತ್ವದಲ್ಲಿ ಅಕ್ಟೋಬರ್ 12 ರಂದು ತಾಲೂಕು ಮಟ್ಟದ ಹಗ್ಗ ಜಗ್ಗಾಟ ಹಾಗೂ ಸ್ಥಳೀಯರ ಕ್ರೀಡೋತ್ಸವ ಜರಗಲಿದೆ.
ಪುರುಷರ ವಿಭಾಗದ ಹಗ್ಗ ಜಗ್ಗಾಟದಲ್ಲಿ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಬೈದಶ್ರೀ ಟ್ರೋಫಿ-2025 ಹಾಗೂ ನಗದು ಬಹುಮಾನ. ಮಹಿಳೆಯರ ವಿಭಾಗದಲ್ಲಿ ಪ್ರಥಮ, ದ್ವಿತೀಯ ಬೈದಶ್ರೀ ಟ್ರೋಫಿ – 2025 ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಗುವುದು. ಸ್ಥಳೀಯರ ಕ್ರೀಡೋತ್ಸವದಲ್ಲಿ ಮಕ್ಕಳು ಪುರುಷರು, ಮಹಿಳೆಯರು ಹಾಗೂ ಹಿರಿಯರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ವಿಜೇತರಿಗೆ ಪ್ರಥಮ ಹಾಗೂ ದ್ವಿತೀಯ ಆಕರ್ಷಕ ಬಹುಮಾನ ನೀಡಿ ಗೌರವಿಸಲಾಗುವುದು.
ಈ ಎಲ್ಲಾ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಂಘದ ಅಧ್ಯಕ್ಷರಾದ ಸಂದೀಪ್ ಬಿ. ಮತ್ತು ಸರ್ವ ಸದಸ್ಯರು ಈ ಮೂಲಕ ವಿನಂತಿಸಿದ್ದಾರೆ.