ಕಾರ್ಕಳ: ಬೈಲೂರು ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಪ್ರತಿಮೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಶಿಲ್ಪಿ ಕೃಷ್ಣ ನಾಯಕ್ ನನ್ನು ಕಾರ್ಕಳ ನಗರ ಠಾಣೆ ಪೊಲೀಸರು ಭಾನುವಾರ ಕೇರಳದ ಕ್ಯಾಲಿಕಟ್ ನಲ್ಲಿ ಬಂಧಿಸಿ, ಇಂದು (ಸೋಮವಾರ) ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಅವರನ್ನು 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಬೆಂಗಳೂರು ಕ್ರಿಷ್ ಆರ್ಟ್ ವರ್ಲ್ಡ್ ಮುಖ್ಯಸ್ಥ ಕೃಷ್ಣ ನಾಯಕ್ ನಿರ್ಮಿಸಿದ್ದ ಕಾರ್ಕಳದ ಬೈಲೂರಿನ ಪರಶುರಾಮ ಥೀಂ ಪಾರ್ಕ್ ನ ಪರಶುರಾಮನ ಮೂರ್ತಿ ಕಳುವಾಗಿದೆ ಎಂದು ಬಜಗೋಳಿಯ ಕೃಷ್ಣ ಶೆಟ್ಟಿ ಎಂಬವರು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೃಷ್ಣ ನಾಯಕ್ ಮೇಲೆ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಬಂಧನದ ಭೀತಿಯಲ್ಲಿದ್ದ ಕೃಷ್ಣ ನಾಯಕ್ ನಿರೀಕ್ಷಣಾ ಜಾಮೀನು ಕೋರಿ ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ನ.7 ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು. ಇತ್ತ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಆರೋಪಿ ಕೃಷ್ಣ ನಾಯ್ಕ್ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ. ಇತ್ತ ಆರೋಪಿಯ ಜಾಡು ಬೆನ್ನತ್ತಿದ ಕಾರ್ಕಳ ಪೊಲೀಸರು ಕೇರಳದ ಕ್ಯಾಲಿಕಟ್ ಎಂಬಲ್ಲಿ ಕೃಷ್ಣ ನಾಯಕ್ ನನ್ನು ಬಂಧಿಸಿದ್ದರು.