
ಬೆಂಗಳೂರು, ನ.1: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ನೀಡಿರುವ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಈ ಹಿಂದೆಯೇ ಸೂಚನೆ ನೀಡಲಾಗಿತ್ತು.ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು ಮತ್ತು ಮುಖ್ಯಮಂತ್ರಿಗಳ, ಸಚಿವರುಗಳ ಸಭೆಗಳಲ್ಲಿ, ಸರ್ಕಾರದ ಎಲ್ಲಾ ಸಭೆ – ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದಾರೆ.




