ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ.
ಹಾಡಹಗಲೇ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಯುವಕನನ್ನು ಬರ್ಬರವಾಗಿ ಕಡಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಮಂಗಳವಾರ ಸಂಭವಿಸಿದೆ
ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ಅಬ್ದುಲ್ ರೆಹಮಾನ್ ಕೊಲೆಯಾದ ಯುವಕ ಎನ್ನುವ ಪ್ರಾಥಮಿಕ ಮಾಹಿತಿ ಲಭಿಸಿದೆ. ಇರಾಕೋಡಿ ಎಂಬಲ್ಲಿ ಮನೆಯೊಂದರ ಮುಂದೆ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ಈ ಸಂದರ್ಭದಲ್ಲಿ ಖಲಂದರ್ ಶಾಫಿ ಎಂಬವರ ಮೇಲೆ ಹಲ್ಲೆಯಾಗಿದ್ದು ಅವರು ಓಡಿಹೋಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಯಾವ ಕಾರಣಕ್ಕಾಗಿ ಈ ಹತ್ಯೆ ನಡೆದಿದೆ ಎನ್ನುವ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದ್ದು,ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ