
ಬಂಟ್ವಾಳ,ಜು.16 : ಬಂಟ್ವಾಳದ KSRTC ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳನ್ನು ಯುವಕನೊಬ್ಬ ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಘಟನೆ ಗುರುವಾರ ಸಂಜೆ ಸಂಭವಿಸಿದೆ.
ಮೃತಪಟ್ಟ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿ ಚೇತನ್ ಎನ್ನಲಾಗಿದ್ದು ಆತ ಸ್ಥಳದಿಂದ ಪರಾರಿಯಾಗಿದ್ದಾನೆ.
ಮೃತ ಯುವತಿ ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.
ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್ಆರ್ಟಿಸಿ ಬಸ್ನಲ್ಲಿ ಕುಳಿತಿದ್ದಳು ಎನ್ನಲಾಗಿದೆ. ಈ ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, “ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ” ಎಂದು ತಿಳಿಸಿದ್ದು, ಬಳಿಕ ಕರೆ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗಿದೆ.
ಬಸ್ನಲ್ಲಿದ್ದ ಪ್ರಯಾಣಿಕರ ಮಾಹಿತಿ ಪ್ರಕಾರ, ಯುವಕನಿಂದ ತಪ್ಪಿಸಿಕೊಳ್ಳಲು ಯುವತಿ ಬಸ್ನಿಂದ ಕೆಳಗಿಳಿದಿದ್ದಾರೆ. ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿ ಬ್ಯಾಗ್ನಿಂದ ಹರಿತವಾದ ಕತ್ತಿಯನ್ನು ಹೊರತೆಗೆದು ಯುವತಿಯನ್ನು ಬೆನ್ನಟ್ಟಿ ಹಿಗ್ಗಾಮುಗ್ಗಾ ಕಡಿದು ಹಲ್ಲೆ ನಡೆಸಿದ್ದಾನೆ ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ವಿಫಲವಾಗಿ ಕುಸಿದು ಬಿದ್ದಿದ್ದಾಳೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ಭಯಾನಕ ಘಟನೆಯಿಂದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು, ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಆರೋಪಿಯು ಯುವತಿಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.




.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
