ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಬೇಧಿಸುವಲ್ಲಿ ಕೊನೆಗೂ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆಬ್ರವರಿ 25 ರಂದು ನಾಪತ್ತೆಯಾಗಿದ್ದ. ಪೊಲೀಸರು ಹುಡುಕಾಟ, ತನಿಖೆ ತೀವ್ರಗೊಳಿಸಿದ್ದರೂ ಆತನ ಸುಳಿವೇ ದೊರೆತಿರಲಿಲ್ಲ. ಇದೀಗ ಬಾಲಕ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ.
ಡಿ ಮಾರ್ಟ್ ಒಳಗೆ ಬಟ್ಟೆಗಳನ್ನು ಬ್ಯಾಗ್ ಗೆ ತುಂಬಿಸಿಕೊಳ್ಳುತ್ತಿದ್ದಾಗ ದಿಗಂತ್ ಸಿಕ್ಕಿಬಿದ್ದಿದ್ದಾನೆ. ದಿಗಂತ್ ಚಲನವಲನ ಕಂಡು ಸಂಶಯಗೊAಡ ಸಿಬ್ಬಂದಿ, ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ, ತಾನು ದಿಗಂತ್ ಎಂದು ಹೇಳಿಕೊಂಡಿದ್ದಾನೆ. ನಂತರ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಆತನನ್ನು ಮಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ.
ತನ್ನ ತಾಯಿಗೆ ಕರೆ ಮಾಡಿ ಮಾತನಾಡಿರುವ ವಿದ್ಯಾರ್ಥಿ ದಿಗಂತ್, ಉಡುಪಿಯಲ್ಲಿ ಸುರಕ್ಷಿತವಾಗಿ ಇದ್ದೇನೆಂದು ಹೇಳಿದ್ದಾನೆ. ನಾನಾಗಿ ಹೋಗಿಲ್ಲ, ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋದರು ಎಂದಿದ್ದಾನೆ ಎನ್ನಲಾಗಿದೆ. ಆದರೆ, ಈ ವಿಚಾರವಾಗಿ ಪೊಲೀಸರಿಂದ ಇನ್ನಷ್ಟೆ ಅಧಿಕೃತ ಮಾಹಿತಿ ದೊರೆಯಬೇಕಿದೆ.

K