Share this news

ಬಂಟ್ವಾಳ: ನೇತ್ರಾವತಿ ನದಿ ತೀರದ ತುಂಬೆ, ಮಾರಿಪಳ್ಳ ಭಾಗದಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಮರಳುಗಾರಿಕಾ ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಒಟ್ಟು 20 ಬೊಟ್ ಗಳನ್ನು ಶುಕ್ರವಾರ ಮುಂಜಾನೆ ವಶಪಡಿಸಿಕೊಂಡಿದ್ದಾರೆ.

ದ.ಕ.ಜಿಲ್ಲಾಧಿಕಾರಿಯವರ ಆದೇಶದಂತೆ ಗಣಿ ಇಲಾಖೆ, ಬಂಟ್ವಾಳ ಕಂದಾಯ ಇಲಾಖೆಯು ಬಂಟ್ವಾಳ ಗ್ರಾಮಾಂತರ ಪೊಲೀಸರ ನೆರವು ಪಡೆದು ಕಾರ್ಯಚರಣೆ ನಡೆಸಿ ಸುಮಾರು 20 ಬೋಟ್ ಗಳನ್ನು ವಶಪಡಿಸಿಕೊಂಡು ಮಂಗಳೂರು ತಾಲೂಕಿನ ಅಡ್ಯಾರಿಗೆ ಸ್ಥಳಾಂತರಿಸಿದ್ದಾರೆ.

ವಶಪಡಿಸಿಕೊಂಡ ಯಾವುದೇ ಬೋಟ್ ಗಳಲ್ಲಿ ಮರಳು ಪತ್ತೆಯಾಗಿಲ್ಲ. ಜೊತೆಗೆ ದಾಳಿಯ ವೇಳೆ ಮರಳುಗಾರಿಕೆಯಲ್ಲಿ ತೊಡಗಿದ್ದ ಕಾರ್ಮಿಕರು ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ, ಹಿರಿಯ ಭೂ ವಿಜ್ಞಾನಿ ಗಿರೀಶ್ ಮೋಹನ್, ಭೂ ವಿಜ್ಞಾನಿ ಮಹಾದೇಶ್ವರ, ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್, ಮಂಗಳೂರು ಕಂದಾಯ ಇಲಾಖೆಯ ಪ್ರಶಾಂತ್ ಪಾಟೀಲ್, ಬಂಟ್ವಾಳ ಕಂದಾಯ ನಿರೀಕ್ಷಕ ಜನಾರ್ದನ, ಗ್ರಾಮಕರಣಿಕರು ಹಾಗೂ ಬಂಟ್ವಾಳ ‌ಗ್ರಾಮಾಂತರ ಪೊಲೀಸರ ತಂಡ ಭಾಗವಹಿಸಿತ್ತು.

Leave a Reply

Your email address will not be published. Required fields are marked *