ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಖಾಸಗಿ ಬಸ್ ಸ್ಕೂಟರ್ ಗೆ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ.
ಮೃತ ದುರ್ದೈವಿಯನ್ನು ತುಂಬೆ ನಿವಾಸಿ ಪ್ರವೀಣ್ (30) ಎಂದು ಗುರುತಿಸಲಾಗಿದೆ. ಇನ್ನೊರ್ವ ಸವಾರ ಸಂದೀಪ್ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸ್ಕೂಟರನ್ನು ಯಾರು ಚಲಾಯಿಸುತ್ತಿದ್ದರು ಎಂಬುದು ಖಚಿತಗೊಂಡಿಲ್ಲ.
ಘಟನೆಗೆ ಕಾರಣವಾದ ಖಾಸಗಿ ಬಸ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.