ಬಂಟ್ವಾಳ : ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಂಟ್ವಾಳದ ಲೊರೆಟ್ಟೊಪದವು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಫರಂಗಿಪೇಟೆ ಸಮೀಪದ 10 ನೇ ಮೈಲಿಗಲ್ಲು ನಿವಾಸಿ ದಿ. ಉನೈಸ್ ಎಂಬವರ ಪುತ್ರಿ ಆಶಿಕ (3) ಮೃತ ಬಾಲಕಿ ಎಂದು ಗುರುತಿಸಲಾಗಿದೆ.
ಮಗು ಬಂಟ್ವಾಳ ಸಮೀಪದ ಲೊರೆಟ್ಟೋಪದವಿನ ತನ್ನ ಅಜ್ಜ,ಅಜ್ಜಿಯ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭ ಮನೆಯ ಮುಂಬಾಗ ಇರಿಸಲಾಗಿದ್ದ ಟೆಂಪೋವಿನ ಗೇರ್ ಅನ್ನು ಮಕ್ಕಳು ಎಳೆದಿದ್ದು , ಈ ವೇಳೆ ಟೆಂಪೊ ಕೆಳಗೆ ಚಲಿಸಿ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
































































































