
ಕಾರ್ಕಳ, ಜೂ.08: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘದ ಪುನರ್ ರಚನೆಯಾಗಿದ್ದು ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಹಾಗೂ ಆರ್ಥಿಕ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ಸದಾನಂದ ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ, ಕಾರ್ಯದರ್ಶಿಯಾಗಿ ಶ್ರೀಮತಿ ಪೂರ್ಣಿಮಾ ಶೆಟ್ಟಿ ಆಯ್ಕೆಯಾಗಿದ್ದಾರೆ.ಶಾಲಾ ಹಳೆ ವಿದ್ಯಾರ್ಥಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ವಸಂತಿ ಹೆಚ್. ಜಿ, ಎಸ್.ಡಿ.ಎಂ.ಸಿ ಅಧ್ಯಕ್ಷ ವಸಂತ ಕುಲಾಲ್ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


.
.
.
.
.
.
.
.
.
.
.
.
.
.
.
.
.
.
.
.
