ಸುಳ್ಯ: ಬೆಳ್ಳಾರೆ ಸಮೀಪದ ನೆಟ್ಟಾರು ಎಂಬಲ್ಲಿ ಪಿಕಪ್ ವಾಹನವೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಹೋದ ಘಟನೆ ಭಾನುವಾರ ಸಂಭವಿಸಿದೆ.
ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ನೆಟ್ಟಾರು ತಿರುವಿನಲ್ಲಿ ಆಕಸ್ಮಿಕವಾಗಿ ಎದುರು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಕೂಡಲೇ ವಾಹನ ನಿಲ್ಲಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಬೆಂಕಿಯ ತೀವ್ರತೆ ವಾಹನ ಸಂಪೂರ್ಣ ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಹಾಗೂ ಸ್ಥಳೀಯರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.