ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಲಕ್ಷ್ಮೀ ಜನಾರ್ಧನ ಶಾಲೆಯ ಬಳಿ ಶನಿವಾರ ಸಂಜೆ ಸಂಭವಿಸಿದೆ.
ನಂದಳಿಕೆ ನಿವಾಸಿ ನಳಿನಿ ಶೆಟ್ಟಿ ಎಂಬವರ ಪುತ್ರಿ ಪ್ರಣಮ್ಯ ಶೆಟ್ಟಿ(14) ಮೃತಪಟ್ಟ ಬಾಲಕಿ.
ಪ್ರಣಮ್ಯ ಶೆಟ್ಟಿ ಶನಿವಾರ ಸಂಜೆ ತನ್ನ ಮನೆಯಿಂದ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಹೋಗಿ ವಾಪಸು ಮನೆಗೆ ರಸ್ತೆ ಬದಿಯಲ್ಲಿ ಹೋಗುತ್ತಿದ್ದಾಗ ಬೆಳ್ಮಣ್ ಕಡೆಯಿಂದ ವೇಗವಾಗಿ ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಈ ಅಪಘಾತದ ರಭಸಕ್ಕೆ ಪ್ರಣಮ್ಯ ಶೆಟ್ಟಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಬೈಕ್ ಸವಾರ ಸಾಂತೂರುಕೊಪ್ಪಲದಲ್ಲಿನ ಗೋಣಿ ಚೀಲ ತಯಾರಿಕಾ ಸಂಸ್ಥೆಯ ನೌಕರ ತನ್ನ ಮನೆಯಾದ ಕೆದಿಂಜೆ ಕಡೆಗೆ ಬೈಕಿನಲ್ಲಿ ಅತೀವೇಗವಾಗಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಬೈಕ್ ಸವಾರನ ನಿರ್ಲಕ್ಷ್ಯತನದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
