ಕಾರ್ಕಳ,ಆ.17:ಮುಂಜಾನೆ ಅಂಗಳದಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.
ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ದೇವಸ್ಯ ಕೆಳಗಿನಮನೆ ನಿವಾಸಿ ಫ್ಲೋರಿನ್ ಮಥಾಯಸ್ ಮೃತಪಟ್ಟವರು.
ಅವರು ಕಳೆದ 35 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ.17 ರ ಭಾನುವಾರ ಬೆಳಗ್ಗೆ ಸುಮಾರು5.30ಕ್ಕೆ ಎಂದಿನಂತೆ ಅಂಗಳದಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಕಾರ್ಕಳ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.