ಕಾರ್ಕಳ: ಬೆಳ್ಮಣ್ ಗ್ರಾಮದ ಬೆಳ್ಮಣ್ ಬೋರ್ಡ್ ಶಾಲೆಯ ಬಳಿ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಟೋರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಅ.10 ರಂದು ರಾತ್ರಿ ಬೆಳ್ಮಣ್ ಬೋರ್ಡ್ ಶಾಲೆಯ ಬಳಿ ಪಡುಬಿದ್ರೆ- ಕಾರ್ಕಳ ಹೆದ್ದಾರಿಯ ರಸ್ತೆ ಬದಿಯಲ್ಲಿ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿದ್ದ ರಾಜೇಶ್ ಎಂಬವರಿಗೆ ಹಿಂದಿನಿಂದ ವೇಗವಾಗಿ ಬಂದ ಪ್ರೇಮಾನಂದ ಎಂಬವರ ರಿಕ್ಷಾ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ರಾಜೇಶ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು, ಅ.7 ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.