Share this news

ಕಾರ್ಕಳ: ಓವರ್ ಟೇಕ್ ಮಾಡುವ ಭರದಲ್ಲಿ ಬೈಕಿಗೆ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದಾರೆ.

ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ರಾಜೇಶ್ (39 ವರ್ಷ) ಗಾಯಗೊಂಡವರು.

ರಾಜೇಶ್ ಆ. 20 ರಂದು ಬೈಕಿನಲ್ಲಿ ಪಡುಬಿದ್ರೆ ಕಡೆಯಿಂದ ರಾಜ್ಯ ಹೆದ್ದಾರಿಯಲ್ಲಿ ಬೆಳ್ಮಣ್ ಕಡೆಗೆ ಬರುತ್ತಿದ್ದಾಗ ಬೆಳ್ಮಣ್ ಗ್ರಾಮದ ಪೆರಾಲ್‌ಪಾದೆ ಹಿಂದಿನಿಂದ ಬರುತ್ತಿದ್ದ ಕಾರು ಬೈಕನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕಿಗೆ ಡಿಕ್ಕಿ ಹೊಡೆದಿದ್ದಾರೆ.

ಅಪಘಾತ ಪರಿಣಾಮ ರಾಜೇಶ್ ರವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಕಾರ್ಕಳ ಡಾ ಟಿ ಎಂ ಎ ಪೈ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                        

                          

                        

                          

 

`

Leave a Reply

Your email address will not be published. Required fields are marked *