
ಕಾರ್ಕಳ, ಏ. 29: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳ್ಮಣ್ ಗ್ರಾಮದ ಜಂತ್ರ ಎಂಬಲ್ಲಿ ಬೆಳ್ಮಣ್-ಉಡುಪಿ ರಾಜ್ಯ ಹೆದ್ದಾರಿಯಲ್ಲಿ ಏ.27 ರಂದು ಸಂಜೆ ಬೆಳ್ಮಣ್ ಕಡೆಯಿಂದ ಉಡುಪಿಗೆ ಹೋಗುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾರ್ಕಳ ಕಸಬಾ ನಿವಾಸಿ ವಿಠಲ ಆಚಾರ್ಯ ಅವರಿಗೆ ಢಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ ವಿಠಲ ಆಚಾರ್ಯ ಗಾಯಗೊಂಡಿದ್ದು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


.
.
.
.
.
.
.
.
.
.
.
.
.
.
.
.
.
.
.
.
