ಕಾರ್ಕಳ:ತಾಲೂಕಿನ ಬೆಳ್ಮಣ್ ಗ್ರಾಮದ ನಂದಳಿಕೆಯಲ್ಲಿ ಬುಧವಾರ ರಾತ್ರಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಪಾದಾಚಾರಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಂದಳಿಕೆ ಗ್ರಾಮ ಪಂಚಾಯತ್ ಎದುರುಗಡೆ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೆಳ್ಮಣ್ ನಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬೈಕ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂತೋಷ್ ಎಂಬವರಿಗೆ ಡಿಕ್ಕಿಯಾಗಿದೆ.
ಅಪಘಾತದ ಪರಿಣಾಮ ಸಂತೋಷ್ ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಕಾರ್ಕಳ ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ, ಅಲ್ಲಿಂದ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.