Share this news

ಕಾರ್ಕಳ: ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳ್ಮಣ್‌ನಲ್ಲಿ ಭಾನುವಾರ ನಡೆದಿದೆ.
ಸಂಜೀವ (40) ಮೃತಪಟ್ಟವರು. ಅವರು ಭಾನುವಾರ ಬೆಳ್ಮಣ್ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪ್ರಕಾಶ್ ಎಂಬವರ ಗದ್ದೆಯಲ್ಲಿ ಟ್ರ್ಯಾಕ್ಟರ್ ನಿಂದ ಉಳುಮೆ ಮಾಡುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು.
ಕೂಡಲೇ ಅವರಿಗೆ ಬೆಳ್ಮಣ್‌ನ ಕ್ಲಿನಿಕ್ ಒಂದರಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.

ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                        

                          

                        

                          

 

Leave a Reply

Your email address will not be published. Required fields are marked *