

ಕಾರ್ಕಳ, ಆ.15: ಮನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ಣು ಎಂಬಲ್ಲಿ ಗುರುವಾರ ಸಂಭವಿಸಿದೆ.
ಬೆಳ್ಮಣ್ ಗ್ರಾಮದ ನಿವಾಸಿ ಕೆ.ಪ್ರಕಾಶ್ ಪೈ (56) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಕಾಶ್ ಪೈ ಕಳೆದ ಒಂದು ತಿಂಗಳಿನಿAದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆ.12ರಂದು ಬೆಳಿಗ್ಗೆ 6 ಗಂಟೆಗೆ ಮನೆಯಿಂದ ಹೊರಗಡೆ ಹೋದವರು ನಾಪತ್ತೆಯಾಗಿದ್ದರು. ಇವರನ್ನು ಹುಡುಕಾಟ ನಡೆಸಿದಾಗ ಪ್ರಕಾಶ್ ಪೈಯವರ ಶವ ಬೆಳ್ಮಣ್ ಗ್ರಾಮದ ಬಿ.ಎಂ. ಕಾಮತ್ ರವರ ಮನೆಯ ಬಾವಿಯ ನೀರಿನಲ್ಲಿ ಕವುಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














