Share this news

 

 

 

 

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ಪೋಷಕರು ಇನ್ನೂ ಪತ್ತೆಯಾಗಿಲ್ಲ.

ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದೀಗ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಶಿಶುವನ್ನು ಪುತ್ತೂರಿನ ನೆಲ್ಲಿಕಟ್ಟೆಯ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ಮಕ್ಕಳ ದತ್ತು ಕೇಂದ್ರಕ್ಕೆ ಆರೈಕೆಗಾಗಿ ದಾಖಲಿಸಲಾಗಿದೆ.

ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1 ನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ, ದೂರವಾಣಿ ಸಂಖ್ಯೆ:0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *