ಬೆಂಗಳೂರು: ಹೈಕೋರ್ಟ್ನ ಹಾಲ್ ಒಂದರಲ್ಲಿ ವ್ಯಕ್ತಿಯೋರ್ವ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಮಂಗಳವಾರ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮೈಸೂರು ಮೂಲದ ಶ್ರೀನಿವಾಸ್ (51) ಎಂದು ಗುರುತಿಸಲಾಗಿದೆ.ಮುಖ್ಯ ನ್ಯಾಯಾಧೀಶರ ಪೀಠ ಇರುವ ಕೋರ್ಟ್ ಹಾಲ್ 1ರ ಬಳಿ ಚಾಕುವಿನಿಂದ ಕತ್ತು ಕೊಯ್ದುಕೊಂಡು ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದುಬಂದಿದೆ.
ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ವ್ಯಕ್ತಿಯನ್ನು ರಕ್ಷಿಸಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತ ಪ್ರಾಣಾಪಾಯದಿಂದ ಪಾರಾಗಿದ್ದಾರೆ