Share this news

ಬೆಂಗಳೂರು: ಮಹಾತ್ಮ ಗಾಂಧೀಜಿಯವರ 155ನೇ ಜನ್ಮ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಾರಥ್ಯದಲ್ಲಿ ಬೆಂಗಳೂರಿನ ಗಾಂಧಿ ಭವನದಿಂದ ವಿಧಾನಸೌಧದವರೆಗೆ ಗಾಂಧಿ ನಡಿಗೆ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಹಿರಿಯ ಮುಖಂಡ ವೀರಪ್ಪ ಮೊಯ್ಲಿ, ಸಚಿವರಾದ ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಶಾಸಕ ರಿಜ್ವಾನ್ ಅರ್ಷದ್, ಮುಖಂಡರಾದ ವಿ.ಎಸ್.ಉಗ್ರಪ್ಪ, ವಿನಯ್ ಕುಮಾರ್ ಸೊರಕೆ ಸೇರಿದಂತೆ ಕಾಂಗ್ರೆಸ್ ಮುಖಂಡರು, ಉನ್ನತ ಅಧಿಕಾರಿಗಳು, ನೂರಾರು ಶಾಲಾ ಮಕ್ಕಳು ಹಾಜರಿದ್ದರು.

Leave a Reply

Your email address will not be published. Required fields are marked *