ಬೆಂಗಳೂರು : ಭಾರೀ ಕುತೂಹಲ ಕೆರಳಿಸಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಡಿ.ಕೆ ಸುರೇಶ್ ಅವರಿಗೆ ಭಾರೀ ಹಿನ್ನಡೆಯಾಗಿದ್ದು,ಬಿಜೆಪಿ ಅಭ್ಯರ್ಥಿ ಡಾ.ಸಿ ಮಂಜುನಾಥ್ ಸುಮಾರು 30 ಸಾವಿರ ಮತಗಳ ಅಂತರದಲ್ಲಿ ಮುನ್ಹಡೆ ಸಾಧಿಸಿದ್ದಾರೆ.
ಈಗಾಗಲೇ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಗಳು 270 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಮೈತ್ರಿ ಮೈತ್ರಿಕೂಟದ ಅಭ್ಯರ್ಥಿಗಳು 200 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕರ್ನಾಟಕದ 17 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಿನ್ನಡೆ ಸಾಧಿಸಿದ್ರೆ, ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಮುನ್ನಡೆ ಸಾಧಿಸಿದಾರೆ.
ದಾವಣಗೆರೆಯ ಕಾಂಗ್ರೆಸಾ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಹಿನ್ನಡೆ ಅನುಭವಿಸಿದ್ದಾರೆ. ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಮುನ್ನಡೆ ಸಾಧಿಸಿದ್ದಾರೆ. ತುಮಕೂರಿನಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.