ಬೆಂಗಳೂರು: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಈಗಾಗಲೇ ಬಂಧಿತನಾಗಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಪ್ರಕರಣದ ನಡುವೆ ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಇಂದು ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದೆ.
ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಭವಾನಿ ರೇವಣ್ಣ ಹೈಕೋರ್ಟ್ ನ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ಎಂದು ಭವಾನಿ ರೇವಣ್ಣ ಪರ ವಕೀಲರು ತಿಳಿಸಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್ ಇಂದು ಈ ಆದೇಶ ಪ್ರಕಟಿಸಿದೆ.