ಬೆಂಗಳೂರು, ಸೆ 25: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಸಾಹಿತಿ, ಪದ್ಮಭೂಷಣ ಎಸ್,ಎಲ್ ಭೈರಪ್ಪ ಬುಧವಾರ ನಿಧನರಾಗಿದ್ದು, ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದು ಸಿಎಂ ಸಿದ್ದರಾಮಯ್ಯ ಅವರು ಎಸ್.ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, ಎಸ್ ಎಲ್ ಬೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವರು ಆಗ್ರಹಿಸಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರದ ವತಿಯಿಂದ ಎಸ್ ಎಲ್ ಭೈರಪ್ಪ ಅವರ ಸ್ಮಾರಕವನ್ನು ನಿರ್ಮಾಣ ಮಾಡುವುದಾಗಿ ಘೋಷಿಸಿದರು..
ಅಂತಿಮ ದರ್ಶನ ಪಡೆದ ಬಳಿಕ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಇಂದು ಸಂಜೆ ಮೈಸೂರಿಗೆ ಭೈರಪ್ಪ ಅವರ ಪಾರ್ಥಿವ ಶರೀರ ಸ್ಥಳಾಂತರಿಸಲಾಗುತ್ತದೆ. ನಾಳೆ ಮೈಸೂರು ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದAತೆ ಎಸ್,ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ.