ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಇದಿಗ ಸಿಬಿಐ ತನಿಖೆ ಭೀತಿ ಎದುರಾಗಿತ್ತು. ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆಗೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ಸಂದರ್ಭ ಕಾಲಾವಕಾಶ ಕೋರಿದ ಹಿನ್ನಲೆಯಲ್ಲಿ ಕೋರ್ಟ್ ನವೆಂಬರ್.26ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆಯಿಲ್ಲ ಆದ್ದರಿಂದ ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ಹೈ ಕೋರ್ಟ್ ನಲ್ಲಿ ನ್ಯಾ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆಯಲ್ಲಿ ಹೈಕೋರ್ಟ್ ಗೆ ಈ ಪ್ರಕರಣ ಸಂಬAಧ ವಾದಿಸಲು ಕಾಲಾವಕಾಶ ನೀಡುವಂತೆ ಸಿಎಂ ಸಿದ್ಧರಾಮಯ್ಯ ಪರ ವಕೀಲರು ಕೋರಿದರು. ಈ ಹಿನ್ನಲೆಯಲ್ಲಿ ಹೈಕೋರ್ಟ್ ವಿಚಾರಣೆಯನ್ನು ನ.26ಕ್ಕೆ ಮುಂದೂಡಿದೆ.