ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಕುರಿತಂತೆ ಕರ್ನಾಟಕ ಹೈಕೋರ್ಟನ ಧಾರವಾಡ ಪೀಠ ಸಿಎಂ ಸಿದ್ಧರಾಮಯ್ಯ ವಿರುದ್ಧದ ಸಿಬಿಐ ತನಿಖೆಯನ್ನು ನಿರಾಕರಿಸಿ ಮಹತ್ವದ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿದೆ.
ಇತ್ತ ಹೈಕೋರ್ಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ಪತ್ರಕರ್ತg ಜತೆÀ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ, ಕಾನೂನು ಹೋರಾಟ ಮುಂದುವರಿಸುತ್ತೇವೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸುತ್ತೇನೆ. ಹೈಕೋರ್ಟ್ ಆದೇಶ ಪ್ರತಿ ಸಿಕ್ಕಿದ ತಕಣವೇ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದರು. ಲೋಕಾಯುಕ್ತ ತನಿಖೆ ಬಗ್ಗೆ ನಮಗೆ ನಂಬಿಕೆ ಇಲ್ಲ ಎಂದು ಹೇಳಿದರು.
ಲೋಕಾಯುಕ್ತ ಮುಡಾ ಹಗರಣದ ತನಿಖೆಯನ್ನು ಕೈಗೆತ್ತಿಕೊಂಡ ದಿನದಿಂದಲೂ ದೂರುದಾರ ಸ್ನೇಹಮಯಿ ಕೃಷ್ಣರದ್ದು ಒಂದೇ ಅಸಮಾಧಾನ. ಸಮರ್ಪಕ ತನಿಖೆಯಾಗಲ್ಲ, ನಮಗೆ ನ್ಯಾಯ ಸಿಗಲ್ಲ ಅಂತಿದ್ದ ಸ್ನೇಹಮಯಿ ಸಿಬಿಐ ತನಿಖೆಗೆ ಆಗ್ರಹ ಮಾಡಿ ಹೈಕೋರ್ಟ್?ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಲೋಕಾಯುಕ್ತ ಪೊಲೀಸರೂ ತನಿಖೆಯನ್ನು ಪೂರ್ಣಗೊಳಿಸಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್?ಗೆ ಸಲ್ಲಿಸಿದ್ದಾರೆ. ಈ ವರದಿಯನ್ನೂ ಪರಿಶೀಲಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿರುವ ಹೈಕೋರ್ಟ್ ಪೀಠ ಶುಕ್ರವಾರ ತೀರ್ಪು ಪ್ರಕಟಿಸಿದೆ.
ವಾದ-ಪ್ರತಿವಾದ
3 ಲಕ್ಷ 26 ಸಾವಿರ ಮೊತ್ತದ ಜಮೀನು ಸ್ವಾಧೀನಕ್ಕೆ ಬದಲಾಗಿ ದುಬಾರಿ ನಿವೇಶನ ಹಂಚಿಕೆ ಮಾಡಲಾಗಿದೆ. ಅಸ್ತಿತ್ವದಲ್ಲೇ ಇಲ್ಲದ ಜಮೀನು ಭೂಪರಿವರ್ತನೆ ಮಾಡಲಾಗಿದೆ. ಕ್ಯಾಬಿನೆಟ್ ಟಿಪ್ಪಣಿ, ಮುಖ್ಯ ಕಾರ್ಯದರ್ಶಿ ಟಿಪ್ಪಣಿಯೂ ಸಿಎಂ ಪತ್ನಿಗೆ ಅನುಕೂಲವಾಗುವಂತೆ ಮಾಡಲಾಗಿದೆ. ನಿಯಮಗಳನ್ನು ತಮಗಿಷ್ಟ ಬಂದAತೆ ತಿರುಚಲಾಗಿದೆ. ಪ್ರಭಾವಿಗಳಿರುವ ಈ ಕೇಸಿನಲ್ಲಿ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಆರೋಪಿ ಮುಖ್ಯಮಂತ್ರಿ ಎಂಬ ಒಂದೇ ಕಾರಣಕ್ಕೆ ಸಿಬಿಐ ಅಥವಾ ಸ್ವತಂತ್ರ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿರುವ ಉದಾಹರಣೆಗಳಿವೆ. ಸಿಎಂ ಉಳಿಸಲು ಇಡೀ ಸಚಿವ ಸಂಪುಟವೇ ಒಟ್ಟಾಗಿರುವಾಗ ಸ್ಥಳೀಯ ಪೊಲೀಸರಿಂದ ಸ್ವತಂತ್ರ ತನಿಖೆ ಸಾಧ್ಯವಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ನ್ಯಾಯ ಎತ್ತಿಹಿಡಿಯಲು ಸಿಬಿಐ ತನಿಖೆ ಅನಿವಾರ್ಯವಿದ್ದು, ಸ್ವತಂತ್ರ ನ್ಯಾಯಸಮ್ಮತ ತನಿಖೆಯಾಗಬೇಕಿದೆ ಎಂದು ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಮಣಿಂದರ್ ಸಿಂಗ್ ವಾದ ಮಾಡಿದ್ದರು.
ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.