ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಈ ಹಿಂದೆ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಮುಂದಿನ ವಿಚಾರಣೆಯ ವರೆಗೆ ಬಂಧಿಸದಂತೆ ಆದೇಶಿಸಿದೆ.
ಈ ಪ್ರಕರಣದಲ್ಲಿ ಅವರನ್ನು ತರಾತುರಿಯಲ್ಲಿ ಬಂಧಿಸುವ ಪ್ರಯತ್ನ ನಡೆದಿದ್ದು ಇದು ಸರ್ಕಾರದ ಪಿತೂರಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಹೈಕೋರ್ಟ್ ಈ ಆದೇಶದಿಂದ ಯಡಿಯೂರಪ್ಪನವರಿಗೆ ಸಧ್ಯಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ