ಮೈಸೂರು: ಮುಡಾ ಹಗರಣಕ್ಕೆ ಸಂಬAಧಿಸಿದAತೆ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಮಹತ್ವದ ಸಾಕ್ಷಿ ತೆರೆದಿಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ವಿಚಾರದಲ್ಲಿ ತಹಶೀಲ್ದಾರ್ ಹಣ ಪಾವತಿಸಿದ್ದಾರೆ. ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿ ಮಾಡಿದ್ದಾರೆ ಎಂದು ಮತ್ತೊಂದು ಕ್ರಯಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಸಿಎಂ ಪತ್ನಿ ಪಾರ್ವತಿ ಅವರ ಕ್ರಯಪತ್ರದಲ್ಲಿ ಮುದ್ರಾಂಕ ಶುಲ್ಕ ಪಾವತಿಯನ್ನು ತಹಶೀಲ್ದಾರ್ ಮಾಡಿದ್ದಾರೆ. ನನ್ನ ಆರೋಪಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಕೇಳಿದ್ದಾರೆ.
ಕ್ರಯಪತ್ರ ನೋಂದಣಿ ಮಾಡಿಸಿಕೊಳ್ಳುವವರು ನೋಂದಣಿಗೆ ಸಂಬAಧಿಸಿದ ಶುಲ್ಕಗಳನ್ನು ಪಾವತಿ ಮಾಡಬೇಕು, ಅದೇ ರೀತಿ ಎನ್.ಮಂಜುನಾಥ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಕ್ರಯಪತ್ರ ಗಮನಿಸಿ, ಮುಡಾದ ವಿಶೇಷ ತಹಶೀಲ್ದಾರ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ ಎಂಬುದು ಖಚಿತವಾಗಿ ತಿಳಿದುಬರುತ್ತದೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್ ನೀಡಿರುವುದರ ಕುರಿತು ಪ್ರತಿಕ್ರಿಯೆ ನೀಡಿರುವ ಸ್ನೇಹಮಯಿ ಕೃಷ್ಣ, ಮುಡಾ ಹಗರಣ ಸಂಬAಧ ನನ್ನ ಬಳಿ ಇರುವ ಸಾಕ್ಷ್ಯಗಳನ್ನ ನಾನು ನೀಡಿದ್ದೇನೆ. ಆ ಸಾಕ್ಷ್ಯಗಳ ಆಧಾರದ ಮೇಲೆ ಸಿದ್ದರಾಮಯ್ಯ ಅವರಿಗೆ ಶಿಕ್ಷೆ ಆಗಬಹುದು ಎಂದು ನಂಬಿದ್ದೇನೆ. ಆದರೆ ನನಗೆ ಮೊದಲಿನಿಂದಲೂ ಕೂಡ ಲೋಕಾಯುಕ್ತದ ಮೇಲೆ ನಂಬಿಕೆ ಇಲ್ಲ. ಈಗ ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ನಾನು ಅರ್ಜಿ ಸಲ್ಲಿಸಿರುವೆ ಎಂದು ಹೇಳಿದ್ದರು.
ಈ ಮೊದಲು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಕೆ.ವಿ. ರಾಜೇಂದ್ರ ಅವರು ಇಡೀ ಮುಡಾ ಹಗರಣವನ್ನು ಬಯಲಿಗೆಳೆದಿದ್ದರು. ಮುಡಾ ಲೇಔಟ್ ಯೋಜನೆಗಳಲ್ಲಿ ಆಗಿರಬಹುದಾದ ಅಕ್ರಮಗಳ ಬಗ್ಗೆ ಮೊದಲು ರಾಜೇಂದ್ರ ಅವರು, ಕಳೆದ ಒಂದು ವರ್ಷದಿಂದ ಮುಡಾ ಆಯುಕ್ತರಿಗೆ ಪತ್ರ ಬರೆದು ವಿವರಣೆ ಕೇಳಿದ್ದರು.
ಸುಮಾರು 15 ಪತ್ರಗಳನ್ನು ಬರೆದಿದ್ದರೂ ಮುಡಾ ಆಯುಕ್ತರಿಂದ ಯಾವುದೇ ಉತ್ತರ ಬಂದಿರಲಿಲ್ಲ. ಮುಡಾ ಹಗರಣ ಬಹಿರಂಗವಾಗುತ್ತಿದ್ದAತೆ ಜಿಲ್ಲಾಧಿಕಾರಿಯನ್ನೇ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತು. ಇದೇ ಈ ಹಗರಣ ತನಿಖೆಯಲ್ಲಿ ಬಹು ಮುಖ್ಯವಾದ ಅಂಶ ಇದಾಗಿದೆ.