Share this news

ನವದೆಹಲಿ : ಬಿಹಾರ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ನವೆಂಬರ್ 6ರಂದು ಮತ್ತು 2ನೇ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.243 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನವೆಂಬರ್ 14ರಂದು ಚುನಾವಣಾ ಫಲಿತಾಂಶ ಬಿಡುಗಡೆಯಾಗಲಿದೆ. 

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ದಿನಾಂಕ ಘೋಷಿಸಿದರು. 243 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ರಾಜ್ಯದಲ್ಲಿ 7.43 ಕೋಟಿ ಮತದಾರರಿದ್ದಾರೆ. ಈ ಪೈಕಿ 3.29 ಕೋಟಿ ಪುರುಷ ಮತದಾರರಿದ್ದರೆ, 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಮೊದಲ ಬಾರಿಗೆ 14 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ನ.6ರಂದು 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದರೇ ನ.11ರಂದು 122 ಕ್ಷೇತ್ರಗಳಿಗೆ ಎರಡನೇ ಹಂತದ ನಡೆಯಲಿದೆ.

ವಿಶೇಷ ಮತಪಟ್ಟಿ ಪರಿಷ್ಕರಣೆಗೂ ಮುನ್ನ ರಾಜ್ಯದಲ್ಲಿ 7.89 ಕೋಟಿ ಮತದಾರರ ಹೆಸರು ಇತ್ತು. ಪರಿಷ್ಕರಣೆಯ ಕರಡು ವರದಿಯಲ್ಲಿ 7.24 ಕೋಟಿ ಹೆಸರು ಮಾತ್ರ ಇತ್ತು. ಅಂದರೆ 65 ಲಕ್ಷ ಹೆಸರು ಕೈಬಿಡಲಾಗಿತ್ತು. ಈ ವೇಳೆ ವಿಪಕ್ಷಗಳು ಉದ್ದೇಶಪೂರ್ವಕವಾಗಿಯೇ ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ರದ್ದುಪಡಿಸಲಾಗಿದೆ ಎಂದು ಆರೋಪಿಸಿದ್ದವು. ಅದಾದ ನಂತರದ ಅವಧಿಯಲ್ಲಿ ಬಹಳಷ್ಟು ಜನರು ದಾಖಲೆ ನೀಡಿ ತಮ್ಮ ಹೆಸರು ಸೇರ್ಪಡೆ ಮಾಡಿದ್ದಾರೆ. ಹೀಗಾಗಿ ಅಂತಿಮ ಪಟ್ಟಿಯಲ್ಲಿ ಮತದಾರರ ಸಂಖ್ಯೆ 7.42 ಕೋಟಿಗೆ ಏರಿದೆ.  243 ಸದಸ್ಯ ಬಲದ ರಾಜ್ಯ ವಿಧಾನಸಭೆಯ ಅವಧಿ ನ.22ಕ್ಕೆ ಕೊನೆಗೊಳ್ಳಲಿದೆ. ಅದಕ್ಕೂ ಮೊದಲು ಚುನಾವಣೆ ನಡೆದು ಹೊಸ ಸರ್ಕಾರ ರಚನೆ ಆಗಬೇಕಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *