ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬAಧಿಸಿದAತೆ ಹಗರಣದ ತನಿಖಾಧಿಕಾರಿಯಾಗಿದ್ದ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತಯ್ಯನನ್ನು ಸಿಐಡಿ ಹಾಗೂ ಎಸ್‌ಐಟಿ ಬಂಧಿಸಿ ಬೆಂಗಳೂರಿನ 1ನೇ ಎಸಿಎಂಎA ಕೋರ್ಟಿಗೆ ಹಾಜರುಪಡಿಸಿದೆ. ಈ ಪ್ರಕರಣ ವಿಚಾರಣೆ ನಡೆಸಿದ ಕೋರ್ಟ್ ಆರೋಪಿ ಲಕ್ಷ್ಮಿಕಾಂತಯ್ಯನನ್ನು 7 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.
ಬಿಟ್ ಕಾಯಿನ್ ಪ್ರಕರಣದಲ್ಲಿ ಲಕ್ಷ್ಮಿಕಾಂತಯ್ಯ ತನಿಖಾಧಿಕಾರಿ ಆಗಿದ್ದರು. ಬಿಟ್ ಕಾಯಿನ್ ಹಗರಣಕ್ಕೆ ಸಂಬAಧಿಸಿದAತೆ ಪ್ರಕರಣದ ಪ್ರಮುಖ ಆರೋಪಿ ಡಿವೈಎಸ್ಪಿ ಶ್ರೀಧರ್ ಪೂಜಾರ್ ಅವರನ್ನು ಬಂಧಿಸುವುದಕ್ಕೆ ಎಸ್‌ಐಟಿ ಇನ್ಸ್ಪೆಕ್ಟರ್ ಅನಿಲ್ ಹಾಗೂ ಅವರ ತಂಡ ತೆರಳಿದಾಗ ಆರೋಪಿ ಡಿವೈಎಸ್ಪಿ ಶ್ರೀಧರ್ ಪೂಜಾರ್, ಪೊಲೀಸರ ಕಾರಿಗೆ ಗುದ್ದಿ ಪರಾರಿಯಾದ ಘಟನೆ ಮಂಗಳವಾರ ರಾತ್ರಿ ಕಾಫಿ ಬೋರ್ಡ್ ಸಿಗ್ನಲ್ ಬಳಿ ನಡೆದಿತ್ತು, ಇದೇ ಪ್ರಕರಣದಲ್ಲಿ ಶ್ರೀಧರ್ ಪೂಜಾರ್ ವಿರುದ್ಧ ಕೊಲೆ ಯತ್ನ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನಲೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.