Share this news

 

 

 

ಬೆಂಗಳೂರು : ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೊನ್ನಣ್ಣ ಹಾಗೂ ಮಂತರ್ ಗೌಡ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಿಜೆಪಿ ಪಟ್ಟು ಹಿಡಿದಿದೆ.ಈ ಕುರಿತು ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್ ಕಮಿಷನರ್ ಗೆ ಮನವಿ ಸಲ್ಲಿಸಿದ್ದಾರೆ

ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ವಿನಯ್ ಸೋಮಯ್ಯ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ವಿನಯ್ ಸೋಮಯ್ಯ ಡೆತ್ ನೋಟ್ ಬರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದು, ಸದ್ಯ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಿಜೆಪಿ ಬಿಗಿ ಪಟ್ಟು ಹಿಡಿದಿದೆ.

ಕೊಡಗಿನಲ್ಲಿ ಬಿಜೆಪಿ ಉಗ್ರ ಹೋರಾಟಕ್ಕೆ ಮುಂದಾಗಿದ್ದು, ಇಂದು ಬಿಜೆಪಿ ನಾಯಕರ ದಂಡೇ ಭೇಟಿ ನೀಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಎಂಎಲ್ ಸಿ ರವೀಂದ್ರ, ಸಂಸದ ಯದುವೀರ್ ಸೇರಿದಂತೆ ಹಲವು ನಾಯಕರು ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಡೆತ್‍ನೋಟಿನಲ್ಲಿ ಇರುವ ಎಲ್ಲರ ಹೆಸರನ್ನೂ ಎಫ್‍ಐಆರ್‍ನಲ್ಲಿ ಸೇರಿಸಬೇಕು’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಆಗ್ರಹಿಸಿದ್ದಾರೆ. ಎಫ್‍ಐಆರ್‍ನಲ್ಲಿ ಒಂದೇ ಒಂದು ಹೆಸರನ್ನು ಬರೆದಿದ್ದಾರೆ. ಇನ್ನೂ ಎರಡು ಹೆಸರು ಸೇರಿಸಲು ಒತ್ತಾಯಿಸಿದ್ದೇವೆ ಎಂದು ತಿಳಿಸಿದರು. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ‘ಉದ್ದೇಶಪೂರ್ವಕವಾಗಿ ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ ಇವರಿಬ್ಬರ ಹೆಸರನ್ನು ಎಫ್ಐಆರ್ ನ ಲ್ಲಿ ಸೇರಿಸಿಲ್ಲ’ ಎಂದು ಆಕ್ಷೇಪಿಸಿದರು.

 

 

 

 

 

Leave a Reply

Your email address will not be published. Required fields are marked *