ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ಗೆ ಅವಾಚ್ಯ ಪದದಿಂದ ನಿಂದಿಸಿದ ಆರೋಪ ಪ್ರಕರಣಕ್ಕೆ ಸಂಬAಧಿಸಿದAತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಇಂದು (ಶುಕ್ರವಾರ) ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದೆ.
ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವಂತೆ ಬಿಜೆಪಿ ಕರೆ ನೀಡಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಜಿಲ್ಲಾ ಬಿಜೆಪಿ ಮುಖಂಡರು ಸಿ.ಟಿ. ರವಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್‌ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನೂರಾರು ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಗಸ್ತು ತಿರುಗುತ್ತಿದ್ದಾರೆ. ನಗರದ ಹನುಮಂತಪ್ಪ ಸರ್ಕಲ್‌ನಲ್ಲಿ 6 ಕೆಎಸ್‌ಆರ್‌ಪಿ ತುಕಡಿಗಳು ಸೇರಿದಂತೆ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿ.ಟಿ ರವಿ ಅವರನ್ನ ಬೆಂಗಳೂರಿಗೆ ಕರೆತರುವ ವೇಳೆ ಖಾನಾಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ ನಡೆದಿದೆ. ಹಣೆಗೆ ಪೆಟ್ಟಾಗಿ ರಕ್ತ ಸೋರುತ್ತಿದ್ದರೂ, ಪೊಲೀಸರು ಸಿ.ಟಿ ರವಿ ಅವರನ್ನ ಹೊತ್ತು ವಾಹನದಲ್ಲಿ ಹಾಕಿದ್ದಾರೆ. ಈ ವೇಳೆ ನನ್ನ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಸಿ.ಟಿ ರವಿ ಚೀರಾಡಿದ್ದಾರೆ. ರಸ್ತೆ ಮಧ್ಯೆ ಧರಣಿ ಕುಳಿತು, ನನ್ನನ್ನ ಕೊಲೆ ಮಾಡಲು ಪ್ರಯತ್ನ ಮಾಡ್ತಿದ್ದೀರಿ, ನೀವು ಅಧಿಕಾರಿಗಳಂತೆ ನಡೆದುಕೊಳ್ತಿದ್ದೀರಾ? ಎಂದು ಕಿಡಿ ಕಾರಿದ್ದಾರೆ.
ಸಿ.ಟಿ ರವಿ ಬಂಧನ ಖಂಡಿಸಿ ತಡರಾತ್ರಿ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿರುವ ಆರ್. ಅಶೋಕ್, ರಾಜ್ಯವನ್ನು ಕಾಂಗ್ರೆಸ್‌ನವರು ಮಿನಿ ಪಾಕಿಸ್ತಾನ ಮಾಡಿದ್ದಾರೆ, ಸಿಟಿ ರವಿ ಜನಪ್ರತಿನಿಧಿಯೆಂಬುದನ್ನು ಮರೆತು ಹಲ್ಲೆ ಮಾಡಿದ್ದಾರೆ. ಸಿಟಿ ರವಿ ಹಣೆಗೆ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ, ಪೊಲೀಸರಿಗೆ ನಮ್ಮ ಸರ್ಕಾರ ಬಂದ ಬಳಿಕ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
