ನವದೆಹಲಿ:ಲೋಕಸಭಾ ಚುನಾವಣೆ ನಡೆಯುವ ಮುನ್ನವೇ ಬಿಜೆಪಿ ಗೆಲುವಿನ ಮೊದಲ ಖಾತೆ ತೆರೆದಿದೆ.
ಗುಜರಾತಿನ ಸೂರತ್ ಲೋಕಸಭಾ ಸ್ಥಾನವನ್ನು ಸ್ಪರ್ಧೆಯಿಲ್ಲದೇ ಬಿಜೆಪಿ ಗೆದ್ದು ತನ್ನ ಮೊದಲ ಗೆಲುವನ್ನು ದಾಖಲಿಸಿದೆ. ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡ ನಂತರ ಮುಖೇಶ್ ದಲಾಲ್ ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಎಲ್ಲಾ ಅಭ್ಯರ್ಥಿಗಳು ಚುನಾವಣೆಯಿಂದ ಹಿಂದೆ ಸರಿದರು. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜಯದ ಮೊದಲ ಖಾತೆ ತೆರೆದಂತಾಗಿದೆ.
ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಈ ಬಾರಿ 400ಕ್ಕೂ ಮೀರಿ ಸ್ಥಾನ ಗಳಿಸುವ ನಿರೀಕ್ಷೆಯಿಟ್ಟುಕೊಂಡಿದೆ.
ಎರಡನೇ ಹಂತದ ಲೋಕಸಭಾ ಚುನಾವಣೆ ಏಪ್ರಿಲ್ 26 ರಂದು 13 ರಾಜ್ಯಗಳ 89 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ. ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕಾಗಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರವನ್ನು ತೀವ್ರಗೊಳಿಸಿವೆ.