ಕಾರ್ಕಳ: ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿರುವ ಉದಯ ಎಸ್ ಕೋಟ್ಯಾನ್ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಅವರನ್ನು ಬಿಜೆಪಿಯಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಕಿಶೋರ್ ಕುಮಾರ್ ಆದೇಶಿಸಿದ್ದಾರೆ.
ಬಿಜೆಪಿ ಪಕ್ಷದ ಪದಾಧಿಕಾರಿಯಾಗಿ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಸ್ಪರ್ಧಿಸುತ್ತಿರುವ ಹಿನ್ನಲೆಯಲ್ಲಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.
ಉದಯ ಕೋಟ್ಯಾನ್ ಈ ಹಿಂದೆ ಜಿಲ್ಲಾ ಪಂಚಾಯಿತಿ ಮಾಜಿ ಸದಸದ್ಯರಾಗಿದ್ದು ಸೇರಿದಂತೆ ಪಕ್ಷದ ಎಲ್ಲಾ ಜವಾಬ್ದಾರಿ ನಿರ್ವಹಿಸಿ ಇದೀಗ ಪಕ್ಷದಿಂದ ಸ್ಪರ್ಧೆಗೆ ಅವಕಾಶ ಸಿಗದ ಕಾರಣದಿಂದ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧೆಗೆ ಇಳಿದಿದ್ದು ಅವರ ಸೋಲು ಗೆಲುವು ಹಾಗೂ ಮುಂದಿನ ರಾಜಕೀಯ ಭವಿಷ್ಯ ಏ 26ರಂದು ನಿರ್ಧಾರವಾಗಲಿದೆ.